ಬೆಂಗಳೂರು:ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳು ಸಸ್ಪೆಂಡ್ ಆಗಲಿವೆ. ಹೌದು, ಆಹಾರ ಇಲಾಖೆಯು ಕಾಳದಂಧೆಯಲ್ಲಿ ಪಡಿತರ ಮಾರಾಟ ತಡೆಯಲು ಇಂಥ ಆದೇಶ ತಂದಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ವಿತರಿಸುವ ಅಕ್ಕಿಯನ್ನು ಕಾರ್ಡ್‌ದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್‌ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ ನೀಡಿದೆ.
ಕೇಂದ್ರ ಸರ್ಕಾರವು ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಅಕ್ಕಿಗೆ 30 ರೂ.ನಂತೆ ಖರೀದಿಸಿ ರಾಜ್ಯಕ್ಕೆ 3 ರೂ.ಗೆ ನೀಡುತ್ತಿದೆ. ಪ್ರತಿ ತಿಂಗಳು ರಾಜ್ಯಕ್ಕೆ 2.17 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡುತ್ತಿದೆ. ಹಾಗಾಗಿ, ಕೇಂದ್ರದ ಸಹಕಾರದೊಂದಿಗೆ ಸರ್ಕಾರವು ಆಹಾರ ಧಾನ್ಯ ವಿತರಣೆ ಮಾಡುತ್ತಿದೆ. ರಾಜ್ಯದಲ್ಲಿ 1,17,01,012 ಬಿಪಿಎಲ್, 10,92,580 ಅಂತ್ಯೋದಯ ಹಾಗೂ 21,05,000 ಎಪಿಎಲ್ ಕಾರ್ಡ್ ಸೇರಿ ಒಟ್ಟು 1,48,98,592 ಕಾರ್ಡ್‌ಗಳಿವೆ. ಪ್ರತಿ ತಿಂಗಳು 19,972 ನ್ಯಾಯಬೆಲೆ ಅಂಗಡಿಗಳಿಂದ ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕಾರ್ಡ್‌ಗೆ 2 ಕೆಜಿ ಗೋಧಿ ವಿತರಿಸಲಾಗುತ್ತಿದೆ.
ಶೇ.15 ಅಕ್ಕಿ ಮಾರಾಟ:ಪ್ರತಿ ತಿಂಗಳು ಸರ್ಕಾರ ವಿತರಿಸುವ ಒಟ್ಟಾರೆ ಅಕ್ಕಿ ಪ್ರಮಾಣದಲ್ಲಿ ಶೇ.15 ಅಕ್ಕಿಯನ್ನು ಕಾಳದಂಧೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಕೆಲವರು ನ್ಯಾಯಬೆಲೆ ಅಂಗಡಿಯಲ್ಲಿ ಪಡೆಯುವ ಅಕ್ಕಿಯನ್ನು ನೇರವಾಗಿ ಅಂಗಡಿಗಳಲ್ಲಿ ಮಾರಾಟ ಮಾಡಿದರೆ, ಇನ್ನೂ ಕೆಲವರು ಏಜೆಂಟ್‌ಗೆ ಮಾರಾಟ ಮಾಡುತ್ತಿದ್ದಾರೆ. ಅಕ್ಕಿ ದುರ್ಬಳಕೆ ಸಂಬಂಧ ಪ್ರತಿ ತಿಂಗಳು ಹತ್ತಾರು ಪ್ರಕರಣಗಳು ದಾಖಲಾಗುತ್ತಿವೆ. ಹಾಗಾಗಿ, ಪಡಿತರ ಸೋರಿಕೆ ಹಾಗೂ ಪಡಿತರ ಮಾರಾಟ ದಂಧೆ ತಡೆಯಲು ಆದೇಶ ತರಲಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಕರೊನಾ ಲಸಿಕೆ ಎಲ್ಲಿ ಸಿಗುತ್ತೆ ಅಂತ ಗೂಗಲ್ ತೋರಿಸುತ್ತೆ..!
ರವಿ ಬಸ್ರೂರ್@ವರ್ಕ್ ಫ್ರಮ್​ ವಿಲೇಜ್​: ಊರಲ್ಲಿ ಸದ್ದಿಲ್ಲದೆ ಏನ್​ ಮಾಡಿದ್ದಾರೆ ನೋಡಿ!!!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 4 =
Remember me
