ಬೆಂಗಳೂರು:ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್​ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಅವರ ಉದ್ದೇಶ ಲೋಕಸಭೆ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾಡಿದ್ದಾರೆ.
ಇದನ್ನೂ ಓದಿ:ಶೀಘ್ರದಲ್ಲೇ ವಂದೇ ಭಾರತ್​ ಸ್ಲೀಪರ್​ ರೈಲು: ಮಾರ್ಗ, ಸಮಯ, ವಿವರ ಹೀಗಿದೆ…
ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ@INCKarnatakaಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ!! 1/5#ರಾವಣ_ತಲೆಗಳ_ಕಾಂಗ್ರೆಸ್_ರಾಜಕಾರಣ
ಕೇರಳದ ಸಿಎಂ ಶ್ರೀ ಪಿಣರಾಯಿ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)February 6, 2024

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು ಎಂದರೆ “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದು ಹೇಳಿದ್ದಾರೆ.
ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ:ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್​ ಪಕ್ಷದವರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ, ಫೆ. 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ ಎಂದು ನೇರವಾಗಿ ರಾಜ್ಯ ಕಾಂಗ್ರೆಸ್​ ವಿರುದ್ಧ ಗುಟುರು ಹಾಕಿದ್ದಾರೆ.
ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ರಾಜ್ಯ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಬಿಜೆಪಿ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಜೆಡಿಎಸ್​ ಸಂಸದರಿಗೆ ಆಹ್ವಾನ:ಜೆಡಿಎಸ್​ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್​ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಕಿಡಿಕಾಡಿದ್ದಾರೆ.
5 ಕೋಟಿ ಕೊಟ್ಟರೆ ಸಿನಿಮಾ ಮಾಡ್ತೀನಿ ಎಂದ ಕೊಡಗಿನ ಕುವರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + eighteen =
Remember me
