ಬೆಂಗಳೂರು:ರಾಜಧಾನಿ ಬೆಂಗಳೂರಿನ ಹೊರವಲಯದ ರೆಸಾರ್ಟ್​ವೊಂದರಲ್ಲಿ ಗಣಿ ಉದ್ಯಮಿಗಳು, ರಾಜಕಾರಣಿಗಳ ಪುತ್ರರು ಸೇರಿದಂತೆ ಹಲವರು ಹೊರರಾಜ್ಯ ಹಾಗೂ ದೇಶಗಳಿಂದ ಯುವತಿಯರನ್ನು ಕರೆಸಿಕೊಂಡು ರೇವ್ ಪಾರ್ಟಿ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರು ಹೊರವಲಯದ ಸಾದಹಳ್ಳಿಯ ಜೆಡಿ ಗಾರ್ಡನ್ ರೆಸಾರ್ಟ್​​ನಲ್ಲಿ ಈ ರೇವ್ ಪಾರ್ಟಿ ನಡೆದಿದ್ದು, ಪೊಲೀಸರಿಂದ ದಾಳಿ ಕೂಡ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಅದನ್ನು ಸಿಸಿಬಿಗೆ ಹಸ್ತಾಂತರಿಸಲಾಗಿದೆ. ಕೆಐಎಎಲ್ ವಿಮಾನನಿಲ್ದಾಣ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಈ ರೆಸಾರ್ಟ್​ನಲ್ಲಿ ಸೆ.6 ರಂದು ರೇವ್​ ಪಾರ್ಟಿ ನಡೆದಿದ್ದು, ಇದರಲ್ಲಿ ಹೊರರಾಜ್ಯದವರು ಮಾತ್ರವಲ್ಲದೆ, ಹೊರದೇಶದ ಯುವತಿಯರೂ ಪಾಲ್ಗೊಂಡಿದ್ದಾರೆ. ಈ ಪಾರ್ಟಿಯಲ್ಲಿ 40ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದು, 9 ಜನರ ವಿರುದ್ಧ ಮೊಕದ್ದಮೆ ದಾಖಲಾಗಿದೆ. ಬಳ್ಳಾರಿ ಮೂಲದ ಗಣಿ ಉದ್ಯಮಿಯ ಪುತ್ರ, ಪ್ರಭಾವಿ ರಾಜಕಾರಣಿಯ ಪುತ್ರ ಕೂಡ ಪಾರ್ಟಿಯಲ್ಲಿ ಇದ್ದರು ಎನ್ನಲಾಗಿದ್ದು, ಅವರನ್ನು ಬಚಾವ್ ಮಾಡುವ ಪ್ರಯತ್ನ ಪೊಲೀಸರಿಂದ ನಡೆದಿದೆಯಾ? ಎಂಬ ಅನುಮಾನ ಕೂಡ ವ್ಯಕ್ತವಾಗಿದೆ.
ಕೆಜಿಎಫ್​-2 ಚಿತ್ರದ ಪ್ರೇರಣೆ; 72 ಗಂಟೆಗಳಲ್ಲಿ 3 ಸೆಕ್ಯುರಿಟಿ ಗಾರ್ಡ್​ಗಳ ಕೊಲೆ: ನಿದ್ರೆಗೆಟ್ಟ ಕೈದಿಗಳು..

ಬೆಳಗಾಗುವುದರೊಳಗೆ ಅಂಗಡಿಯೇ ನಾಪತ್ತೆ!; ಜಮೀನು ವಿವಾದ ಕಾರಣವೇ?

ಗಟ್ಟಿಗಿತ್ತಿ ಅಜ್ಜಿ ಕೈಗೆ ಸಿಕ್ಕಿಬಿದ್ದ ಸರಗಳ್ಳಿ; ರಾಜಮ್ಮನ ಎದೆಗಾರಿಕೆ-ಸಮಯಪ್ರಜ್ಞೆಗೆ ಪೊಲೀಸರ ಸೆಲ್ಯೂಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − four =
Remember me
