ಮಂಗಳೂರು:ಹಾಸನ ಜಿಲ್ಲೆ ಆಲೂರು ತಾಲೂಕಿನ ಕೆ.ಹೊಸಕೋಟೆ ಸಮೀಪದ ನಂದಿಪುರ ಎಸ್ಟೇಟ್‌ನಲ್ಲಿ ಏ.10ರಂದು ರಾತ್ರಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಮಂಗಳೂರು ನಗರದ ಮಹಿಳಾ ಹೆಡ್ ಕಾನ್‌ಸ್ಟೇಬಲ್ ಹಾಗೂ ಆಕೆಯ ಪುತ್ರ ಭಾಗಿಯಾಗಿರುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದ್ದು, ಈ ಬಗ್ಗೆ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಹಾಸನ ಎಸ್ಪಿ ಅವರಿಗೆ ಪತ್ರ ಬರೆದಿದ್ದಾರೆ.
ಮಂಗಳೂರು ನಗರ ಸೆನ್ (ಸೈಬರ್, ಇಕಾನಾಮಿಕ್ ಆ್ಯಂಡ್ ನಾರ್ಕೊಟಿಕ್) ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿರುವ ಶ್ರೀಲತಾ ಹಾಗೂ ಆಕೆಯ ಪುತ್ರ ಅತುಲ್ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಪಾರ್ಟಿ ಆಯೋಜನೆಯಲ್ಲಿ ಅತುಲ್ ಪ್ರಮುಖ ಪಾತ್ರ ವಹಿಸಿರುವುದು ತನಿಖೆಯಿಂದ ಗೊತ್ತಾಗಿದೆ. ಆತನನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದು, ತಲೆಮರೆಸಿಕೊಂಡಿದ್ದಾನೆ. ಶ್ರೀಲತಾ ಅವರ ರಕ್ತದ ಮಾದರಿ ಸಂಗ್ರಹಿಸಿ ಬಿಡುಗಡೆ ಮಾಡಿದ್ದಾರೆ.
ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟರೆ ಮತ್ತೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ. ಪೊಲೀಸ್ ವಿಚಾರಣೆ ವೇಳೆ ತಾನು ಮಗನನ್ನು ಕರೆದೊಯ್ಯಲು ಬಂದಿದ್ದೆ ಎಂದು ಶ್ರೀಲತಾ ಹೇಳಿಕೆ ನೀಡಿದ್ದರು. ಹಾಗಾದರೆ ತಾಯಿಗೆ ಗೊತ್ತಿದ್ದೇ ಮಗ ಪಾರ್ಟಿಯಲ್ಲಿ ಭಾಗವಹಿಸಿರುವುದು ಸಾಬೀತಾದಂತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರೇವ್ ಪಾರ್ಟಿಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಭಾಗಿಯಾಗಿರುವ ಬಗ್ಗೆ ಮಾಧ್ಯಮಗಳ ವರದಿ ಗಮನಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಹಾಸನ ಎಸ್ಪಿ ಶ್ರೀನಿವಾಸ ಗೌಡ ಅವರಿಗೆ ಪತ್ರ ಬರೆದು ವರದಿ ಕೇಳಿದ್ದಾರೆ. ಸೋಮವಾರ ವರದಿ ಬರುವ ಸಾಧ್ಯತೆಯಿದ್ದು, ಆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಡ್‌ಕಾನ್‌ಸ್ಟೇಬಲ್ ಏ.10ರಂದು ಸಂಜೆ ಕರ್ತವ್ಯ ಮುಗಿಸಿ ಕಾರಿನಲ್ಲಿ ತನ್ನ ಪುತ್ರ ಆಯೋಜಿಸಿದ್ದ ರೇವ್ ಪಾರ್ಟಿಯಲ್ಲಿ ಭಾಗವಹಿಸಲು ನಂದಿಪುರಕ್ಕೆ ತೆರಳಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.
ಕಲ್ಲಿನಿಂದ ಹೊಡೆದು ಸಾರಿಗೆ ಬಸ್​ ಚಾಲಕನ ಪ್ರಾಣ ತೆಗೆದ ಕಿಡಿಗೇಡಿಗಳು! ಮುಷ್ಕರ ಬಿಟ್ಟು ಕೆಲಸಕ್ಕೆ ಬಂದಿದ್ದಕ್ಕೆ ಶಿಕ್ಷೆ?
ವಾಟ್ಸ್​ಆ್ಯಪ್ ಬಳಕೆದಾರರೇ ಎಚ್ಚರ! ನಿಮ್ಮ ಮೊಬೈಲ್​ಗೆ ಬಂದೀತು ಪಿಂಕ್​ ವಾಟ್ಸ್​ಆ್ಯಪ್ ಲಿಂಕ್​…
ಕಲ್ಲಿನಿಂದ ಹೊಡೆದು ಸಾರಿಗೆ ಬಸ್​ ಚಾಲಕನ ಪ್ರಾಣ ತೆಗೆದ ಕಿಡಿಗೇಡಿಗಳು! ಮುಷ್ಕರ ಬಿಟ್ಟು ಕೆಲಸಕ್ಕೆ ಬಂದಿದ್ದಕ್ಕೆ ಶಿಕ್ಷೆ?
ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ​ ನಿಧನ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + seven =
Remember me
