ಬೆಂಗಳೂರು:ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರ ಪಾರ್ಥಿವ ಶರೀರದ ಅಂತಿಮ ವಿಧಿ-ವಿಧಾನ ಇಂದು ಸಂಜೆ 4 ಗಂಟೆಗೆ ನಡೆಯಲಿದೆ. ಬನಶಂಕರಿಯ ಚಿತಾಗಾರದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಲಿದೆ.
ಪ್ರಾರ್ಥನಾ ಶಾಲೆ ಆವರಣಲ್ಲಿ ಅಂತಿಮ ಸಂಸ್ಕಾರ ಮಾಡುವ ಇಚ್ಛೆ ಕುಟುಂಬಸ್ಥರಲ್ಲಿ ಇತ್ತು. ಆದರೆ ವಸತಿ ಪ್ರದೇಶವಾದ್ದರಿಂದ ಅಲ್ಲಿ ಅಗ್ನಿಸ್ಪರ್ಶ ಮಾಡಲು ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರಿಂದ ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.
ರವಿ ಬೆಳಗೆರೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವುದರಿಂದ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 9ರ ಬಳಿಕ ಬೆಂಗಳೂರಿನ ಪದ್ಮನಾಭನಗರದ ಪ್ರಾರ್ಥನಾ ಶಾಲೆಯ ಆವರಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಇನ್ನಿಲ್ಲ

ಬದುಕಿಡೀ ಬರೆದ ರವಿ ಬೆಳಗೆರೆ; ಬರೆಯುತ್ತಲೇ ಬದುಕು ಮುಗಿಸಿದರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
