ಬೆಂಗಳೂರು:ತಿಲಕ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2007ರಲ್ಲಿ ನಡೆದಿದ್ದ ಶಬನಮ್ ಡೆವಲಪರ್ಸ್ ಉದ್ಯೋಗಿಗಳ ಜೋಡಿಕೊಲೆ ಪ್ರಕರಣದ ಆರೋಪಿ ರವಿ ಪೂಜಾರಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಶಬನಮ್ ಡೆವಲಪರ್ಸ್ ಉದ್ಯೋಗಿಗಳಾದ ರವಿ ಹಾಗೂ ಶೈಲಜಾ ಎಂಬುವರ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ರವಿ ಪೂಜಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಇತ್ತೀಚೆಗೆ ವಜಾಗೊಳಿಸಿದೆ.
ವಿಚಾರಣೆ ವೇಳೆ ವಾದ ಮಂಡಿಸಿದ್ದ ರವಿ ಪೂಜಾರಿ ಪರ ವಕೀಲರು, ಪ್ರಕರಣದ ಇತರ ಆರೋಪಿಗಳನ್ನು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ. ಅರ್ಜಿದಾರರ ವಿರುದ್ಧ ಸಮೀಉಲ್ಲಾ ಎಂಬುವರ ಕೊಲೆಗೆ ಸಂಚು ರೂಪಿಸಿದ ಆರೋಪವಿದೆ. ಆದರೆ, ಸಮೀಉಲ್ಲಾ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗಳಿಬ್ಬರ ಕೊಲೆಯಾಗಿದೆ. ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಾರೂ ಇಲ್ಲ. ಅರ್ಜಿದಾರರು ಕಳೆದ 8 ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದು, ವಿಚಾರಣೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಆದ್ದರಿಂದ, ಜಾಮೀನು ಮಂಜೂರು ಮಾಡಬೇಕೆಂದು ಕೋರಿದರು.
ಅದಕ್ಕೆ ಆಕ್ಷೇಪಿಸಿದ್ದ ಸರ್ಕಾರಿ ಅಭಿಯೋಜಕರು, ಕಳೆದ 26 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಹಳ ಕಷ್ಟಪಟ್ಟು ಬಂಧಿಸಿ ಭಾರತಕ್ಕೆ ಕರೆತರಲಾಗಿದೆ. ಆತನ ವಿರುದ್ಧ ಅಂದಾಜು 108 ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಆ್ಯಂಟನಿ ಫರ್ನಾಂಡಿಸ್ ಎಂದು ಹೆಸರು ಬದಲಿಸಿಕೊಂಡು ವಿದೇಶದಲ್ಲಿ ನೆಲೆಸಿದ್ದ. ಈಗ ಜಾಮೀನು ನೀಡಿದರೆ ಮತ್ತೆ ತಲೆ ಮರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ಕೋರ್ಟ್ ಆದೇಶವೇನು?:ಪ್ರಕರಣದ ಇತರ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದ ಮಾತ್ರಕ್ಕೆ ಅರ್ಜಿದಾರನ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷಿ ಇಲ್ಲವೆಂದು ಹೇಳಲಾಗದು. ಆರೋಪಿಯನ್ನು ವಿದೇಶದಲ್ಲಿ ಬಂಧಿಸಲಾಗಿದೆ. ತಲೆಮೆರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಕರಣದ ಇತರ ಆರೋಪಿಗಳು ಹಾಗೂ ಅರ್ಜಿದಾರ ಆರೋಪಿಯ ವಿರುದ್ಧದ ದೋಷಾರೋಪ ಪಟ್ಟಿಯನ್ನು ವಿಭಜಿಸಲಾಗಿದೆ. ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಸ್ವತಂತ್ರವಾಗಿ ನಿರ್ಣಯ ಕೈಗೊಳ್ಳಬೇಕಿದೆ. ಅರ್ಜಿದಾರನ ವಿರುದ್ಧದ ಇನ್ನೂ ಹಲವು ಪ್ರಕರಣಗಳು ಬಾಕಿ ಇವೆ. ಒಂದೊಮ್ಮೆ ಜಾಮೀನು ನೀಡಿದರೆ ವಿಚಾರಣೆ ನಿಯಮಿತವಾಗಿ ಹಾಜರಾಗುತ್ತಾನೆ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಜಾಮೀನು ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಕರಣದ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 10 =
Remember me
