ವಿಜಯಪುರ:ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ರವಿಕಾಂತ ಪಾಟೀಲ್​ ಇಂದು ಜೆಡಿಎಸ್​ ಸೇರಿದ್ದಾರೆ. ಸಿಂದಗಿ ಪಟ್ಟಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ರವಿಕಾಂತ ಅವರು ಇಂಡಿ ಕ್ಷೇತ್ರದಿಂದ ಪಕ್ಷೇತರನಾಗಿ ಮೂರು ಬಾರಿ ಶಾಸಕರಾಗಿದ್ದರು. 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲುಂಡಿದ್ದರು. ನಂತರ ಬಿಜೆಪಿಗೆ ಸೇರಿದ್ದರು. 2018ರಲ್ಲಿ ಇಂಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಬೇಕೆಂಬ ಆಕಾಂಕ್ಷೆ ಹೊಂದಿದ್ದರು. ಆದರೆ ಟಿಕೆಟ್​ ಸಿಕ್ಕಿರಲಿಲ್ಲ. ಅದಾದ ನಂತರ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಿ ಸೋತಿದ್ದರು.
ಜೆಡಿಎಸ್ ಜಿಲ್ಲಾದ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹಾಗೂ ಇತರರ ಸಮ್ಮುಖದಲ್ಲಿ ರವಿಕಾಂತ ಜೆಡಿಎಸ್​ ಸೇರಿದ್ದಾರೆ. ಮುಂಬರುವ ಸಿಂದಗಿ ಉಪ ಚುನಾವಣೆಗೆ ಜೆಡಿಎಸ್​ನಿಂದ ಸ್ಪರ್ದೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಾಯ್​ಫ್ರೆಂಡ್​ ಅನ್ನು ಮನೆಗೆ ಕರೆದುಕೊಂಡು ಬಂದಳೆಂದು 6ನೇ ಮಹಡಿಯಿಂದ ಮಹಿಳೆಯನ್ನು ದೂಡಿ ಕೊಲೆ ಮಾಡಿದ ಮಾಲೀಕ!

ಮಲೈಕಾಗೆ ಮೊದಲನೇ ಪತಿಯಿಂದ ಗಿಫ್ಟ್​! ಅಂತದ್ದೇನಿದೆ ಆ ಗಿಫ್ಟ್​ ಬಾಕ್ಸ್​ನಲ್ಲಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − six =
Remember me
