ಮಂಡ್ಯ:ಪ್ರತಿ ಟನ್ ಕಬ್ಬಿಗೆ 4,500 ರೂ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಸರ್ಕಾರ ಗಮನಸೆಳೆಯುವ ನಿಟ್ಟಿನಲ್ಲಿ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಸೆ.19ರಂದು ಬೃಹತ್ ರೈತ ಸಮಾವೇಶ ಆಯೋಜಿಸಲಾಗಿದೆ. ಕೂಡಲೇ ಬೇಡಿಕೆ ಈಡೇರಿಸದಿದ್ದರೆ ದಸರಾ ಹಬ್ಬದಂದು ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರಕ್ಕೆ ತಡೆಯೊಡ್ಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.ಅಂದು ಬೆಳಗ್ಗೆ 10 ಗಂಟೆಯಿಂದ ಸರ್‌ಎಂವಿ ಪ್ರತಿಮೆಯಿಂದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ವರೆಗೆ ಮೆರವಣಿಗೆ ನಡೆಯಲಿದೆ. ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ ಸುಮಾರು 10 ಸಾವಿರ ರೈತರನ್ನು ಸೇರಿಸಲಾಗುತ್ತಿದೆ. ಕಾರ್ಯಕ್ರಮವನ್ನು ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಉದ್ಘಾಟಿಸಲಿದ್ದಾರೆ. ಎ.ಎಲ್.ಕೆಂಪೂಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ದಿಕ್ಸೂಚಿ ಭಾಷಣ ಮಾಡಲಿದ್ದು, ವಿಶೇಷ ಆಹ್ವಾನಿತರಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್, ಸಾಮಾಜಿಕ ಹೋರಾಟಗಾರ ಎಸ್.ಆರ್.ಹೀರೆಮಠ, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಮೈಸೂರು ವಿವಿ ಭೂಗರ್ಭಶಾಸ್ತ್ರ ವಿಜ್ಞಾನಿ ಡಾ.ಎಚ್.ಟಿ.ಬಸವರಾಜಪ್ಪ ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.ಕೆಆರ್‌ಎಸ್ ಡ್ಯಾಂ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಬೇಕು. ಕೃಷಿ ಪಂಪ್‌ಸೆಟ್, ಭಾಗ್ಯಜ್ಯೋತಿ, ಕುಟೀರಜ್ಯೋತಿ ಮನೆಗಳಿಗೆ ಡಿಜಿಟಲ್ ಮೀಟರ್ ಅಳವಡಿಸಬಾರದು. ಅಂತೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸಮಾವೇಶದ ಮೂಲಕ ಆಗ್ರಹಿಸಲಾಗುವುದು. ನಮ್ಮ ಬೇಡಿಕೆ ಈಡೇರಿಸದಿದ್ದರೆ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು ಎಂದರು.ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್, ಲಿಂಗಪ್ಪಾಜಿ, ವಿಜಯಕುಮಾರ್, ಶಿವಳ್ಳಿ ಚಂದ್ರು, ಪ್ರಸನ್ನ, ಎಸ್.ಕೆ.ರವಿಕುಮಾರ್, ಬಾಲಚಂದ್ರ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 4 =
Remember me
