ಬೆಂಗಳೂರು:ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿಯಾಗಿರುವ ಕನ್ನಡತಿ ಶ್ರೇಯಾಂಕಾ ಪಾಟೀಲ್​ ಅವರು ಮಾರ್ಚ್​​ 24 ರಂದು ವಿಜಯಾನಂದ ಟ್ರಾವೆಲ್ಸ್ ವತಿಯಿಂದ ಹಮ್ಮಿಕೊಂಡಿರುವ ವಿಆರ್​ಎಲ್​ ಬಸ್​​ ವರ್ಕ್​​ ಶಾಪ್​ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
2024 ಮಾರ್ಚ್​​ 24 ರಂದು ಸಂಜೆ 4:00 ಗಂಟೆಗೆ ಮೈಸೂರು ರಸ್ತೆಯಲ್ಲಿರುವ ಆರ್​ವಿ ಕಾಲೇಜ್ ಬಳಿ ವಿಆರ್​ಎಲ್​ ಬಸ್​​ ವರ್ಕ್​​ ಶಾಪ್​ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ರಾಯಲ್ ಚಾಲೆಂಜರ್ಸ್ ಆಟಗಾರ್ತಿ ಕನ್ನಡತಿ ಶ್ರೇಯಾಂಕಾ ಪಾಟೀಲ್​ ಅವರು ಭಾಗಿಯಾಗಲಿದ್ದಾರೆ.
ಈ ಕಾರ್ಯಕ್ರಮದ ವೇಳೆ ಶ್ರೇಯಾಂಕಾ ಪಾಟೀಲ್​ ಅವರು ಅಭಿಮಾನಿಗಳ ಜತೆ ಸಮಾಲೋಚನೆ ನಡೆಸುವುದರ ಜತೆ ಬ್ಯಾಟ್​ ಹಿಡಿದು ಕ್ರಿಕೆಟ್​​ ಆಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಕುಟುಂಬದ ಜತೆ ಬಂದು ವೀಕ್ಷಿಸಲು ಅವಕಾಶ ಇರುತ್ತದೆ.
ವುಮೆನ್ಸ್​ ಪ್ರೀಮಿಯರ್​ ಲೀಗ್​ನಲ್ಲಿ (ಡಬ್ಲುಪಿಎಲ್​) ಆರ್​ಸಿಬಿ ತಂಡದ ಪರವಾಗಿ ನೀಡಿದ ಪ್ರದರ್ಶನದಿಂದ 2023ರಲ್ಲಿ ಭಾರತ ಮಹಿಳಾ ತಂಡದ ಪರ ಟಿ20 ಹಾಗೂ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ ಬೆಂಗಳೂರಿನ ಹುಡುಗಿ ಶ್ರೇಯಾಂಕಾ ಪಾಟೀಲ್​ ಭವಿಷ್ಯದ ತಾರೆ ಎನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + fourteen =
Remember me
