ಬೆಂಗಳೂರು:ರದ್ದು ಪಡಿಸಲಾಗಿರುವ ಪಿಎಸ್​ಐ ನೇಮಕಾತಿಗಾಗಿ ಮರುಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳಿಗೆ ಈ ಕುರಿತು ಸಚಿವರು ಭರವಸೆ ನೀಡಿದ್ದು, ಮರುಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರುಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ಹೇಳಿದರು.
ರದ್ದಾಗಿರುವ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲ 56,000 ಅಭ್ಯರ್ಥಿಗಳು ಮರುಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದರು. ಮರುಪರೀಕ್ಷೆ ನಡೆಸುವುದು ತಡವಾದರೆ ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರಿಸಿ ಎಂದು ಕೂಡ ಸಚಿವರು ಸಲಹೆ ನೀಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಇದೇ ಮೊದಲ ಸಲ ರಾಜ್ಯ ಸಚಿವರ ಸ್ಥಾನಮಾನ ನೀಡಿದ ಸರ್ಕಾರ..

ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಇನ್ನಷ್ಟು ಜೋರು; ನಾಳೆ-ನಾಡಿದ್ದು ಕರಾವಳಿ-ಮಲೆನಾಡಲ್ಲಿ ರೆಡ್ ಅಲರ್ಟ್..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − twelve =
Remember me
