ಬೆಂಗಳೂರು:ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದ್ದು, ಕರೊನಾ ಕಾಲದಲ್ಲಿನ ಕೆಲವು ಸಂಗತಿಗಳು ಭ್ರಷ್ಟರಿಗೆ ಆಘಾತಕಾರಿ ಆಗಿ ಪರಿಣಮಿಸುವ ಸಾಧ್ಯತೆಗಳು ಗೋಚರಿಸಿವೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ನಿಟ್ಟಿನಲ್ಲಿ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಆರೋಗ್ಯ ಇಲಾಖೆಯಿಂದ ಆಗಲಿರುವ ಕೆಲವು ಮಹತ್ವದ ತನಿಖೆಗಳ ಕುರಿತು ಮಾಹಿತಿ ಬಹಿರಂಗಪಡಿಸಿದರು.
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಮುಂದಾದ ಸರ್ಕಾರ ಇದನ್ನು ಎರಡು ಇಲಾಖೆಗಳ ಸಮನ್ವಯದಲ್ಲಿ ನಡೆಸಲು ನಿರ್ಧರಿಸಿದೆ. ಪ್ರಕರಣ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವುದರಿಂದ ಎರಡೂ ಇಲಾಖೆಗಳ ಸಮನ್ವಯದಲ್ಲಿ ತನಿಖೆ ನಡೆಯಲಿದೆ. ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿದ್ದರೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ ನಾವು ಮರು ತನಿಖೆಗೆ ಮುಂದಾಗಿದ್ದು, ಆ ಕುರಿತ ವಿಸ್ತೃತ ಕಾರ್ಯ ಯೋಜನೆ ಕೂಡ ಸಿದ್ಧವಾಗಿದೆ ಎಂದರು.
ಇದನ್ನೂ ಓದಿ:ಮುಂದಿನ ಒಂದು ವರ್ಷದಲ್ಲಿನ ಉಚಿತ ಚಿಕಿತ್ಸೆಗೆಂದೇ 65 ಕೋಟಿ ರೂ. ಮೀಸಲು: ಅಮೃತ ಆಸ್ಪತ್ರೆ
ಅಲ್ಲದೆ ಕೋವಿಡ್ ಅವಧಿಯ ಟೆಂಡರ್​ಗಳ ಮರು ಪರಿಶೀಲನೆಯನ್ನೂ ಮಾಡಲಾಗುವುದು. ಹೆಚ್ಚು ಬಿಡ್​ ಮಾಡಿರುವ ಹಾಗೂ ಅನುಮಾನ ಮೂಡಿಸುವಂಥ ಕೆಲವು ಟೆಂಡರ್​ಗಳನ್ನು ಮರು ಪರಿಶೀಲನೆಗೆ ಒಳಪಡಿಸಲಾಗುವುದು ಎಂದೂ ದಿನೇಶ್ ಗುಂಡೂರಾವ್ ತಿಳಿಸಿದರು. ಜಿವಿಕೆ ಸಂಸ್ಥೆ ಮೇಲೆ ಆರೋಪ ಬಂದಿರುವುದರಿಂದ 108 ಆ್ಯಂಬುಲೆನ್ಸ್​​ ಮತ್ತು ಡಯಾಲಿಸಿಸ್ ಸೆಂಟರ್​ ಬಗ್ಗೆಯೂ ಮರು ಟೆಂಡರ್​ ಕರೆಯಲಾಗುವುದು ಎಂದು ತಿಳಿಸಿದರು.
ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ

ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ: ವಜ್ರದೇಹಿ ಸ್ವಾಮೀಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 5 =
Remember me
