|ಬಿ.ಎಸ್. ಯಡಿಯೂರಪ್ಪಮಾಜಿ ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2022-23 ನೇ ಸಾಲಿನ ಆಯವ್ಯಯವು ಅಭಿವೃದ್ಧಿಪರವಾಗಿದೆ. ಸರ್ವರ್ಸ³ಯಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣದ ಉದ್ದೇಶವನ್ನು ಒಳಗೊಂಡಿದೆ. ಕೇಂದ್ರ ಸರ್ಕಾರದಂತೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ದೃಷ್ಟಿಯಲ್ಲಿ ಕೃಷಿಗೆ ಪೂರಕವಾಗಿದ್ದು, ರೈತರಿಗೆ ಹೆಚ್ಚಿನ ನೆರವನ್ನು ಒದಗಿಸುವ ಉದ್ದೇಶ ಕಂಡು ಬರುತ್ತದೆ. ರೈತರಿಗೆ ಎಕರೆಗೆ ರೂ. 250 ರಂತೆ ಡೀಸೆಲ್ ಸಹಾಯಧನ ನೀಡುವ ರೈತಶಕ್ತಿ ಮತ್ತು ಕೊಯ್ಲೋತ್ತರ ನಿರ್ವಹಣೆ ಹಾಗೂ ರಫ್ತು ಮಾಡಲು ಅನುದಾನ ಒದಗಿಸಿರುವುದು ಹಾಗೂ ಹೈನುಗಾರಿಕೆಗೆ ಪೋ›ತ್ಸಾಹ ನೀಡಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ, ರೈತರ ಆರೋಗ್ಯ ರಕ್ಷಣೆಗೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ.
ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗಳಾದ ಎತ್ತಿನಹೊಳೆ, ಮೇಕೆ ದಾಟು, ಭದ್ರಾ ಮೇಲ್ದಂಡೆ ಹಾಗೂ ತುಂಗಭದ್ರಾ ಸಮಾನಾಂತರ ಜಲಾಶಯ ನಿರ್ವಣಕ್ಕೆ ಅನುದಾನವನ್ನು ಒದಗಿಸಿರುವುದರಿಂದ ದೀರ್ಘಕಾಲೀನವಾಗಿ ರಾಜ್ಯದ ನೀರಾವರಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಿದಂತಾಗಿದೆ. ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿ, ಕನಕದಾಸ ವಿದ್ಯಾರ್ಥಿ ನಿಲಯ, ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಶಿಕ್ಷಣಕ್ಕೂ ಸಾಕಷ್ಟು ಆದ್ಯತೆಯನ್ನು ಬೊಮ್ಮಾಯಿ ನೀಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಡ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ಎಂಬ ಉಚಿತ ಆನ್​ಲೈನ್ ಕೋಚಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲು ಯೋಜನೆ ರೂಪಿಸಿರುವುದು ಉತ್ತಮ ಕ್ರಮ. ಪರಿಶಿಷ್ಟ ಜಾತಿ/ಪ.ಪಂಗಡ ಮತ್ತು ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಮತ್ತು ಇತರ ಮಕ್ಕಳ ಉನ್ನತ ವಿದ್ಯಾಭ್ಯಾಸ ಪೋ›ತ್ಸಾಹಿಸಲು ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ಬೃಹತ್ತಾದ 1,000 ವಿದ್ಯಾರ್ಥಿ ಸಾಮರ್ಥ್ಯದ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸ್ಥಾಪಿಸಲು ಉದ್ದೇಶಿಸಿರುವುದು ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಹಾಗೂ ಸೌಹಾರ್ದತೆಯ ಬೆಳವಣಿಗೆಗೆ ಪೂರಕವಾಗಲಿದೆ. ಉತ್ತರ ಕರ್ನಾಟಕದ ಭಾಗಕ್ಕೆ ಅನುಕೂಲವಾಗುವಂತೆ ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಸಂಸ್ಥೆಯನ್ನು ಸ್ಥಾಪಿಸುವುದು ಹಾಗೂ ಬೆಳಗಾವಿಯಲ್ಲಿ ಕಿದ್ವಾಯಿ ಕ್ಯಾನ್ಸರ್ ಕೇಂದ್ರವನ್ನು ಸ್ಥಾಪಿಸುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಒತ್ತು ನೀಡಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲಾಗಿದೆ. ಅಪಾಯಕರ ಸನ್ನಿವೇಶದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ವಿುಕರಿಗೆ ಮಾಸಿಕ 2,000 ರೂ. ಗಳ ಸಂಕಷ್ಟ ಭತ್ಯೆ ನೀಡುತ್ತಿರುವುದು ಸ್ವಾಗತಾರ್ಹ.
ರಾಯರ ಸನ್ನಿಧಿಯಲ್ಲಿ ನಟ ಸುದೀಪ್​; ಶ್ರೀಸುಬುಧೇಂದ್ರ ತೀರ್ಥರಿಂದ ಸನ್ಮಾನ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − two =
Remember me
