ಬೆಂಗಳೂರು:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಶುಕ್ರವಾರ ಬೆಳಗ್ಗೆ 10ಕ್ಕೆ ‘ಸಂವಿಧಾನ ಪೀಠಿಕ ಓದು’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭಾಗವಹಿಸಲಿದ್ದಾರೆ.
ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಸುಮಾರು 5 ಸಾವಿರ ಜನ ಸೇರಲಿದ್ದಾರೆ.
ಈ ಕಾರ್ಯಕ್ರಮಕ್ಕೆ ರಾಜ್ಯ, ದೇಶ, ವಿದೇಶಗಳಿಂದ 2.27 ಕೋಟಿ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿಯಿಂದ ಹಿಡಿದು ಸಚಿವಾಲಯದ ವರೆಗಿನ ಎಲ್ಲ ಕಚೇರಿಗಳಲ್ಲಿ ಸಂವಿಧಾನ ಪೀಠಿಕ ಓದು ನಡೆಯಲಿದೆ. ಸಂಘ-ಸಂಸ್ಥೆಗಳು, ಕಂಪನಿಗಳು, ಬಹುರಾಷ್ಟ್ರೀಯ ಕಂಪನಿಗಳು, ಸರ್ಕಾರಿ ಇಲಾಖೆಗಳು, ಬ್ಯಾಂಕ್‌ಗಳು ಕೂಡ ನೋಂದಣಿ ಮಾಡಿಕೊಂಡಿದ್ದು, ಅವರೆಲ್ಲ ತಾವಿರುವ ಸ್ಥಳದಲ್ಲೇ ಸಂವಿಧಾನ ಪೀಠಿಕೆ ಓದಲಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸಾರ್ವಜನಿಕರು ಸಹ ತಾವಿರುವ ಸ್ಥಳದಲ್ಲೇ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × four =
Remember me
