ಬೆಂಗಳೂರು:ಮಕ್ಕಳನ್ನು ಓದು ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ಓದುವ ಬೆಳಕು ಕಾರ್ಯಕ್ರಮವನ್ನು ಆರಂಭಿಸಿದೆ.
ಈ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಂಥಾಲಯಗಳನ್ನು ಗ್ರಾಮೀಣ ಅರಿವು ಕೇಂದ್ರಗಳನ್ನಾಗಿಸಲು ಗ್ರಂಥಾಲಯಗಳ ನವೀಕರಣ, ಡಿಜಿಟಲೀಕರಣ ಸೇರಿದಂತೆ ವಿವಿಧ ಕ್ರಮಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ. ‘ಓದುವ ಬೆಳಕು’ ಕಾರ್ಯಕ್ರಮದಡಿ ಹಲವಾರು ಅಭಿಯಾನ ಆಯೋಜಿಸಿ ಗ್ರಂಥಾಲಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸಲು 2023ರ ಸೆಪ್ಟೆಂಬರ್‌ನಲ್ಲಿ ‘ನಾನು ಓದುವ ಪುಸ್ತಕ’ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಹೆಸರನ್ನು ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರದರ್ಶಿಸಲಾಗುವುದು. ಗ್ರಂಥಾಲಯಕ್ಕೆ ಭೇಟಿ ನೀಡುವ ಮಕ್ಕಳು ಪುಸ್ತಕವನ್ನು ಓದಲು ಗ್ರಂಥಾಲಯ ಮೇಲ್ವಿಚಾರಕರು ಪ್ರೋತ್ಸಾಹಿಸುತ್ತಾರೆ. ಮಕ್ಕಳು ಪುಸ್ತಕವನ್ನು ಓದಿ ಮುಗಿಸಿದ ನಂತರ ತಾವು ಓದಿದ ಪುಸ್ತಕಗಳ ಬಗ್ಗೆ ಸೂಚನೆಗಳಂತೆ ಮಾಹಿತಿ ಒದಗಿಸಬೇಕು. ಮಕ್ಕಳು ಓದಿದ ಪುಸ್ತಕಗಳ ಸಂಖ್ಯೆಯನ್ನು ಗ್ರಂಥಾಲಯದಲ್ಲಿ ಪ್ರದರ್ಶಿಸಲಾಗುವುದು. ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚು ಪುಸ್ತಕಗಳನ್ನು ಓದಿದ ಮಕ್ಕಳ ಹೆಸರುಗಳನ್ನು ತಿಂಗಳ ಕೊನೆಯ ದಿನ ಘೋಷಿಸಲಾಗುವುದು. ಗ್ರಾಮೀಣ ಮಕ್ಕಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳುವಂತೆ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + eleven =
Remember me
