ಬೆಂಗಳೂರು:ನಾವು ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಿ ಹೈಕಮಾಂಡ್ ಗೆ ಹೆಸರು ರವಾನೆ ಮಾಡುತ್ತೇವೆ. 11ರಂದು ಹೈಕಮಾಂಡ್ ನಾಯಕರು ಚರ್ಚೆ ಮಾಡಿ ಪಟ್ಟಿ ಪ್ರಕಟಿಸುತ್ತಾರೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಇದನ್ನೂ ಓದಿ:ಟೇಕಾಫ್ ಆಗುವ ವೇಳೆಯೇ ಕಳಚಿ ಬಿತ್ತು ವಿಮಾನದ ಚಕ್ರ…! ವಿಡಿಯೋ ವೈರಲ್​
ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ ಯಡಿಯೂರಪ್ಪ, ಯೋಗೇಶ್ವರ್, ಮುನಿರತ್ನ ಅವರ ಜತೆಗೆ ಈಗ ಅವರು ತಬ್ಬಾಡುತ್ತಿದ್ದಾರೆ. ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂದು ಬಹಳ ವ್ಯಥೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ನಾವು ಕುಮಾರಣ್ಣ ಅವರನ್ನು 5 ವರ್ಷ ಸಿಎಂ ಮಾಡಬೇಕು ಎಂದು ಮೈತ್ರಿ ಸರ್ಕಾರ ಮಾಡಿದೆವು. ಆ ಸರ್ಕಾರ ಬೇಳಿಸಿದವರ ಜೊತೆ ಈಗ ಸ್ನೇಹ ಬೆಳೆಸುತ್ತಿದ್ದಾರೆ. ಅವರ ವಕ್ತಾರರಾಗಿದ್ದಾರೆ. ಇದೆಲ್ಲವನ್ನೂ ನಿರ್ಧರಿಸಲು ಜನರಿಗೆ ಬಿಡುತ್ತೇನೆ ಎಂದು ತಿಳಿಸಿದರು.
ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ:ಬಿಜೆಪಿ ಮೈಸೂರಿನಲ್ಲಿ ಹಾಲಿ ಸಂಸದರ ಜೊತೆಗೆ ಯದುವೀರ್ ಅವರ ಹೆಸರನ್ನು ಶಿಫಾರಸ್ಸು ಮಾಡಿರುವ ಬಗ್ಗೆ ಕೇಳಿದಾಗ, “ಅವರು ಯಾರ ಹೆಸರನ್ನಾದರೂ ಶಿಫಾರಸ್ಸು ಮಾಡಲಿ. ನಮ್ಮ ಪಕ್ಷದ ನೀತಿ, ಸಿದ್ಧಾಂತದ ಮೇಲೆ ನಾವು ಚುನಾವಣೆ ಎದುರಿಸುತ್ತೇವೆ. ನಾವು ಅವರ ಪಕ್ಷದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ ನಮ್ಮ ಕಾರ್ಯಕ್ರಮದ ಬಗ್ಗೆ ಆಲೋಚಿಸುತ್ತೇವೆ. ಜನರ ಮಧ್ಯೆ ಇರುವ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸುತ್ತೇವೆ ಎಂದು ತಿಳಿಸಿದರು.
ರಾಜಕೀಯಕ್ಕೆ ಅಖಾಡಕ್ಕೆ ಟಾಲಿವುಡ್ ನಟ! ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − five =
Remember me
