ಬೆಂಗಳೂರು:ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ವದಂತಿಯಷ್ಟೇ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಯೇ 2024ರ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುನರುಚ್ಛರಿಸಿದ್ದಾರೆ.
ಚಿತ್ರಕಲಾ ಪರಿಷತ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಶಾಸಕರು ಮುಖ್ಯಮಂತ್ರಿ ವಿರುದ್ಧ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ ಎಂಬುದು ಕೇವಲ ವದಂತಿ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಚರ್ಚೆಗಳು ನಡೆದಿಲ್ಲ. ಸರ್ಕಾರ ಮತ್ತು ಪಕ್ಷದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಿರುತ್ತವೆ. ಅದನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ ಎಂದು ಹೇಳಿದರು.
ವಿಷ ಬೇಕಾದರೂ ಕುಡಿಯುತ್ತೇನೆ:ಮುಂಬರುವ ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ವಿಷ ಕುಡಿ ಎಂದು ಹೇಳಿದರೂ, ನಾನು ಕುಡಿಯುತ್ತೇನೆ. ನನ್ನ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಆ ಬಗ್ಗೆ ನಾನೂ ಚಿಂತನೆ ಮಾಡಿಲ್ಲ. ಪಕ್ಷ ಯಾವ ನಿಲುವು ತಳೆದರೂ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.
ಸಾರಿಗೆ ನೌಕರರ ಬೇಡಿಕೆ ಈಡೇರಿಕೆ:ಸಾರಿಗೆ ನೌಕರರು ಬಯಸಿದಂತೆ 9 ಬೇಡಿಕೆಗಳ ಪೈಕಿ 5 ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದಂತೆ ಪ್ರಮುಖ ಬೇಡಿಕೆಯಾದ ವೇತನ ಪರಿಷ್ಕರಣೆ ಕುರಿತಂತೆ ಈಗಾಗಲೆ ಸಭೆ ನಡೆಸಲಾಗಿದೆ. ಇನ್ನೂ ಮೂರ್ನಾಲ್ಕು ಸಭೆಗಳು ನಡೆಯಬೇಕಿದ್ದು, ಆನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ನಿಗಮಗಳಲ್ಲಿ ಆದಾಯ ಕುಸಿತ ಉಂಟಾಗಿದೆ. ಹೀಗಾಗಿ ಸಾಲ ಪಡೆಯಲಾಗುತ್ತಿದೆ. ಇದು ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಅದರಿಂದ ನಿಗಮಗಳಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.
ನಟ ಸತ್ಯಜಿತ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಮಗಳು! ಹಿರಿಜೀವದ ಮೇಲೆ ಆರೋಪಗಳ ಸುರಿಮಳೆ

ಉತ್ತರಖಂಡ ಹಿಮ ದುರಂತದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಉಪಗ್ರಹ ಚಿತ್ರಗಳು..!

ಹಿಟ್​ ಆ್ಯಂಡ್​​ ರನ್​ ಕೇಸ್​: ಕಾರು ಮಾಹಿತಿ ಬೆನ್ನತ್ತಿದ್ದ ಬೆಂಗ್ಳೂರ್​ ಪೊಲೀಸ್ರಿಗೆ ಸಿಕ್ಕಿದ್ದು ಶಿಲ್ಪಾ ಶೆಟ್ಟಿ ದಂಪತಿ ಪರಿಚಯ!

ರಾಮ ಮಂದಿರದ ಹೆಸರಲ್ಲಿ ವಂಚಿಸುತ್ತಿದ್ದ ದುಷ್ಕರ್ಮಿಗಳ ಬಂಧನ

ದ್ವಿತೀಯ ಪಿಯುಸಿ ಎಕ್ಸಾಂ ಡೇಟ್​ ಫೈನಲ್​: ಮೇ 24ರಿಂದಲೇ ಆರಂಭ, ಇಲ್ಲಿದೆ ಟೈಂಟೇಬಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
