ಬೆಂಗಳೂರು:ವಿಧಾನಸಭೆ ಚುನಾವಣೆ ಎದುರಿಸಲು ಪಕ್ಷ ಸಿದ್ಧವಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲಿದೆ. ಮಾದರಿ ನೀತಿ ಸಂಹಿತೆ ಪಾಲನೆಗೆ ಬದ್ಧವಾಗಿದ್ದು, ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಆರ್.ಟಿ.ನಗರದ ತಮ್ಮ ನಿವಾಸದ ‌ಬಳಿ ಸುದ್ದಿಗಾರರಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಪೂರ್ವ ನಿಗದಿತ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಏ.9ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅದೊಂದೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೇರೆ ಯಾವುದೇ ಕಾರ್ಯಕ್ರಮಗಳಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಬರೋಬ್ಬರಿ 8 ಕೋಟಿ ರೂ. ಗೂ ಅಧಿಕ ವರದಕ್ಷಿಣೆ ನೀಡಿದ ಸಹೋದರರು!
ವಿವಿಧ ಹಂತದ ಪ್ರಚಾರ ತಂತ್ರಚುನಾವಣೆ ಪೂರ್ವ ಸಿದ್ಧತಾ ಚಟುವಟಿಕೆ, ಕಾರ್ಯಕ್ರಮಗಳ ಮೂಲಕ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಪ್ರತಿ ಮನೆಗೆ ಎರಡು ಬಾರಿ ತಲುಪಿದ್ದು, ಸರ್ಕಾರದ ಸಾಧನೆ, ಯೋಜನೆಗಳನ್ನು ವಿವರಿಸಿದ್ದಾರೆ. ಚುನಾವಣಾ ಪ್ರಚಾರ ತಂತ್ರವು ಮೂರು‌ ಹಂತದಲ್ಲಿರಲಿದೆ. ಡಿಜಿಟಲ್ ಯುಗಕ್ಕೆ ತಕ್ಕಂತೆ ಪ್ರಚಾರ ಕಾರ್ಯಕ್ಕೆ ಡಿಜಿಟಿಲೀಕರಣ ಸ್ಪರ್ಶವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ನಾಯಕರು ಬೂತ್ ಮತ್ತು ವಿಧಾನಸಭೆ ಕ್ಷೇತ್ರ, ರಾಜ್ಯಮಟ್ಟದ ನಾಯಕರು ಜಿಲ್ಲಾಮಟ್ಟ ಹಾಗೂ ರಾಷ್ಟ್ರೀಯ ನಾಯಕರು ರಾಜ್ಯಮಟ್ಟದ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ವಿವರಿಸಿದರು.
ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 10ಕ್ಕೆ ಮತದಾನ, ಮೇ 13ರಂದು ಫಲಿತಾಂಶ

ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್​: ಮಾಜಿ ಸಿಎಂ ಸಿದ್ದು ಹೇಳಿಕೆ

ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
