ಬೆಂಗಳೂರು:ಉದ್ಯಮಿಯೊಬ್ಬರು ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದ್ದು, ಸಾವಿನ ಬಗ್ಗೆ ಅನುಮಾನವೂ ವ್ಯಕ್ತವಾಗಿದೆ.
ಮಾರಾಂಜಿನಪ್ಪ (62) ಮೃತ ದುರ್ದೈವಿ. ಎರಡನೇ ಪತ್ನಿ ಗೀತಾ ಮನೆಯಿಂದ ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ಇಂದು ಮುಂಜಾನೆ 3 ಗಂಟೆಗೆ ನಡೆದಿದೆ. ಕಟ್ಟಡದಿಂದ ಬಿದ್ದ ಉದ್ಯಮಿಯನ್ನು ಗೀತಾ ಅವರೇ ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಾವಿನ ಬಗ್ಗೆ ಮಾರಾಂಜಿನಪ್ಪ ಅವರ ಮೊದಲ ಪತ್ನಿ ಉಮಾದೇವಿ ಅನುಮಾನ ವ್ಯಕ್ತಪಡಿಸಿ, ಅನ್ನಪೂರ್ಣೇಶ್ವರಿ ನಗರದಲ್ಲಿ ಗೀತಾ ವಿರುದ್ಧ ದೂರು ದಾಖಲಿಸಿದ್ದಾರೆ. ನನ್ನ ಪತಿಯ ಮೈ ಮೇಲೆ ಕಚ್ವಿರುವುದು, ಹೊಡೆದಿರುವ ಗಾಯಗಳಿವೆ. ನನ್ನ ಗಂಡನನ್ನು ಹೊಡೆದು ಕೊಲೆ ಮಾಡಿರುವ ಗೀತಾ ವಿರುದ್ದ ಕ್ರಮ ಕೈಗೊಳ್ಳಿ ಎಂದು ಆರೋಪಿಸಿ ಮೊದಲ ಪತ್ನಿ ಉಮಾದೇವಿ ದೂರು ನೀಡಿದ್ದಾರೆ.
ಇದನ್ನೂ ಓದಿ:ಬಿಳಿ ಮೊಟ್ಟೆ vs ಕಂದು ಮೊಟ್ಟೆ ಯಾವುದು ಆರೋಗ್ಯಕರ? ಇಲ್ಲಿದೆ ಉಪಯುಕ್ತ ಮಾಹಿತಿ…
ಮಾರಾಂಜಿನಪ್ಪ, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. ಮೊದಲ ಹೆಂಡತಿ ಬಾಗಲಕುಂಟೆಯಲ್ಲಿ ವಾಸವಾಗಿದ್ದರು. ಎರಡನೇ ಪತ್ನಿ ಅನ್ನಪೂರ್ಣೇಶ್ವರಿ ನಗರದಲ್ಲಿ ವಾಸ‌ವಾಗಿದ್ದರು. ನಿನ್ನೆ ರಾತ್ರಿ ಎರಡನೇ ಪತ್ನಿ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.
ಕುಡಿದ ಮತ್ತಿನಲ್ಲಿದ್ದ ಮಾರಾಂಜಿನಪ್ಪ ಬೆಳಗ್ಗೆ 3 ಗಂಟೆ ವೇಳೆಗೆ ಮಹಡಿಯಿಂದ ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಎರಡನೇ ಪತ್ನಿ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಇದು ಆಕಸ್ಮಿಕವಲ್ಲ ಕೊಲೆ ಎಂದು ಮೊದಲ ಪತ್ನಿ ದೂರು ನೀಡಿದ್ದಾರೆ. ಆದರೆ, ವೈದ್ಯರ ಪ್ರಾಥಮಿಕ ವರದಿಯಲ್ಲಿ ಆಕಸ್ಮಿಕವಾಗಿ ಬಿದ್ದಿರುವ ಬಗ್ಗೆ ಉಲ್ಲೇಖವಾಗಿದೆ.
ಸದ್ಯ ಉಮಾದೇವಿ ನೀಡಿರುವ ದೂರಿನ ಆಧಾರದ ಮೇಲೆ ಗೀತಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
‘ನಾನು ಹರಿದ ಜೀನ್ಸ್​​ ಧರಿಸುವುದಿಲ್ಲ’ಎಂದು ಅಫಿಡವಿಟ್​​ಗೆ ಸಹಿ ಹಾಕಿದ ಕಾಲೇಜು ವಿದ್ಯಾರ್ಥಿಗಳು

ವಯಸ್ಸು 48 ಆದ್ರೂ ನೀವಿನ್ನೂ ಮದ್ವೆ ಆಗಿಲ್ಲ ಏಕೆ? ನಟಿ ನಗ್ಮಾ ಕೊಟ್ಟ ಉತ್ತರ ವೈರಲ್​!

ದಿನನಿತ್ಯ ಕ್ಯಾರೆಟ್ ತಿಂದರೆ, ಜ್ಯೂಸ್ ಕುಡಿದರೆ ಈ ಎಲ್ಲಾ ಸಮಸ್ಯೆಗಳು ದೂರವಾಗುತ್ತೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
