ಬೆಂಗಳೂರು:ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಮತ್ತು ಪ್ರೌಢಶಾಲೆ ಗಳಿಗೆ 10 ಸಾವಿರ ಸೇರಿ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ಪ್ರಸ್ತುತ ಪ್ರಾಥಮಿಕ ಶಾಲೆಯಲ್ಲಿ 33,863 ಮತ್ತು ಪ್ರೌಢಶಾಲೆಯಲ್ಲಿ 8,954 ಸೇರಿ 42,817 ಹುದ್ದೆ ಖಾಲಿ ಇವೆ. ಒಂದೊಮ್ಮೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದಲ್ಲಿ ಅಥವಾ ಇನ್ನಿತರ ಕಾರಣಗಳಿಂದಾಗಿ ಅಗತ್ಯತೆ ಬಿದ್ದರೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 45 ಶಿಕ್ಷಕರ ನೇಮಕಾತಿ ಸಮ್ಮತಿಸಲಾಗಿದೆ.
2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಶಿಕ್ಷಕರ ಕೊರತೆ ನೀಗಿಸಲು ಆದ್ಯತೆ ನೀಡಲಾಗಿದೆ. ಈ ಉದ್ದೇಶದಿಂದ 35 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.
ಯಾವೆಲ್ಲ ಷರತ್ತು?
ಖಾಲಿ ಇರುವ 33,863 ಹುದ್ದೆಗಳಿಗೆ ಜಿಲ್ಲಾವಾರು, ತಾಲೂಕುವಾರು ಅತಿಥಿ ಶಿಕ್ಷಕರನ್ನು ಮೊದಲ ಹಂತದಲ್ಲಿ ನೇಮಕ ಮಾಡಿಕೊಳ್ಳಲು ತಿಳಿಸಿದೆ. ಪ್ರೌಢಶಾಲೆಗೆ 10 ಸಾವಿರ ಶಿಕ್ಷಕರು: ಪ್ರೌಢಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಾತಿಗೂ ಸರ್ಕಾರ ಅನುಮತಿ ನೀಡಿದೆ. ಸದ್ಯ ಪ್ರೌಢಶಾಲೆಯಲ್ಲಿ 8,954 ವಿಷಯ ಶಿಕ್ಷಕರ ಕೊರತೆ ಇದೆ. ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೂ 8,954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಂತೆ ತಿಳಿಸಿದೆ.
ಮಂಜೂರಾದ ಖಾಲಿ ಹುದ್ದೆಗಳಿಗೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದು. ಅತಿಥಿ ಶಿಕ್ಷಕರ ನೇಮಕವನ್ನು ಮುಖ್ಯ ಶಿಕ್ಷಕರ ಮೂಲಕವೇ ಮಾಡುವುದು. ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶದಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕ ರಹಿತ ಶಾಲೆಗಳಿಗೆ/ಹೆಚ್ಚು ವಿದ್ಯಾರ್ಥಿಗಳಿರುವ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು. ವಿಶೇಷವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳು, ದ್ವಿಭಾಷಾ, ಆಂಗ್ಲ ಭಾಷಾ ಮಾಧ್ಯಮದ ತರಗತಿಗಳಿರುವ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಶೇ.100 ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕು. ಹುದ್ದೆಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳತಕ್ಕದ್ದು.
ಅತಿಥಿ ಶಿಕ್ಷಕರ ಹುದ್ದೆಗಳಿಗೆ ಕಾಯಂಗೊಂಡ ಶಿಕ್ಷಕರು ವರ್ಗಾವಣೆ ಅಥವಾ ನೇಮಕ ಹೊಂದಿದ್ದಲ್ಲಿ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವುದು. ಬಳಿಕ ತಾಲೂಕಿನಲ್ಲಿ ಅಗತ್ಯಕ್ಕೆ ಅನುಸಾರವಾಗಿ ಹಂಚಿಕೆ ಮಾಡುವುದು. ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳ ಶಿಕ್ಷಕರ ನೇಮಕಕ್ಕೆ ಮೊದಲ ಆದ್ಯತೆ ನೀಡಬೇಕು. ಹೆಚ್ಚುವರಿ ಶಿಕ್ಷಕರು ಇರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡದಂತೆ ಸೂಚಿಸಲಾಗಿದೆ. ಪ್ರಾಥಮಿಕ ಶಾಲೆಗೆ 10 ಸಾವಿರ ರೂ. ಮತ್ತು ಪ್ರೌಢಶಾಲೆಗೆ 10,500 ರೂ. ಗೌರವಧನ ನಿಗದಿ ಮಾಡಿದೆ.
ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಬೇಡಿಕೆ ಪರಿಗಣಿಸದೆ ಸರ್ಕಾರವು ಹಿಂದಿನ ವರ್ಷದಂತೆಯೇ ಷರತ್ತು ವಿಧಿಸಿ ನೇಮಕ ಮಾಡಿಕೊಳ್ಳುತ್ತಿದೆ. ಇದರಿಂದ ಹತ್ತಾರು ವರ್ಷಗಳಿಂದ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುವವರಿಗೆ ಅನ್ಯಾಯ ಮಾಡಿದಂತಾಗಿದೆ.
| ದುರುಗಪ್ಪ ಅಮರಾವತಿ ಅತಿಥಿ ಶಿಕ್ಷಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 8 =
Remember me
