ಬೆಂಗಳೂರು:ಮಹಾರಾಷ್ಟದ ಸಾಂಗ್ಲಿ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಮಾಧ್ಯಮ ಶಾಲೆಗಳಿಗೆ 24 ಮರಾಠಿ ಮಾಧ್ಯಮ ಶಿಕ್ಷಕರನ್ನು ನೇಮಿಸಿರುವ ಕುರಿತು ಅಲ್ಲಿನ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಕೇರಳ ಸರ್ಕಾರ ಇದೇ ರೀತಿ ಕಾಸರಗೋಡಿನಲ್ಲಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಂ ಭಾಷೆಯ ಶಿಕ್ಷಕರನ್ನು ನೇಮಿಸಿತ್ತು. ನಮ್ಮ ಮಧ್ಯ ಪ್ರವೇಶದ ಬಳಿಕ ಕೇರಳ ಸರ್ಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಇದೀಗ ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ ಎಂದರು.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕಡ್ಡಾಯವಾಗಿ ಕನ್ನಡ ಭಾಷಾ ಮಾಧ್ಯಮದಲ್ಲಿ ಪಾಠ ಮಾಡುವ ಶಿಕ್ಷಕರನ್ನೇ ಕನ್ನಡ ಮಾಧ್ಯಮ ಶಾಲೆಗಳಿಗೆ ಮಹಾರಾಷ್ಟ್ರ ಸರ್ಕಾರ ನೇಮಿಸಬೇಕು. ಈಗಾಗಲೇ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ನಡೆಸಿದ್ದೇನೆ. ಗಡಿಭಾಗದಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆ ಉಳಿವಿಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
