ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಅನುದಾನಿತ ಶಾಲೆಗಳಿಗೆ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂಭತ್ತು ವರ್ಷದಲ್ಲಿ ಅನುದಾನಿತ ಶಾಲೆಗೆ ಒಬ್ಬೇಒಬ್ಬ ಶಿಕ್ಷಕರನ್ನೂ ನೇಮಕ ಮಾಡಿಲ್ಲ. ಸಂಬಳ ಕೊಡುವ ಹೊರೆ ಕಾರಣ ಸರ್ಕಾರ ಈ ನೇಮಕ ಹಾಗೆ ಉಳಿಸಿಕೊಂಡು ಬಂದಿದೆ. 2013ರಿಂದ ಇಲ್ಲಿಯವರೆಗೆ ಅನುದಾನಿತ ಶಾಲೆಯಲ್ಲಿ ನೇಮಕ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಹೇಳಿದರು. ಅನುದಾನಿತ ಕನ್ನಡ ಮಾಧ್ಯಮ ಶಾಲೆ ಉಳಿಸಬೇಕಾಗಿದೆ. ಒಳ್ಳೆಯ ಶಿಕ್ಷಕರು ಇರುವುದು ಕನ್ನಡ ಮಾಧ್ಯಮ ಶಾಲೆಗಳಲ್ಲಿ. 8, 9, 10ನೇ ತರಗತಿ ಮಕ್ಕಳಿಗೆ ಮರು ಸಿಂಚನ (ವಿಶೇಷ ವಿಜ್ಞಾನ) ತರಗತಿ ಮಾಡಲಾಗುತ್ತಿದೆ. ಒಟ್ಟು 8 ಲಕ್ಷ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಶಿಕ್ಷಕರ ಕೊರತೆ ಸಾಕಷ್ಟು ನೀಗಿಸಿದ್ದೇವೆ:46 ಸಾವಿರ ಶಾಲೆಗಳು ಹಾಗೂ ಕಾಲೇಜುಗಳಿದ್ದು, ಈ ಪೈಕಿ 15 ಸಾವಿರ ಅನುದಾನಿತ ಶಾಲೆಗಳಿವೆ. 42 ಸಾವಿರ ಅತಿಥಿ ಶಿಕ್ಷಕರು ನೇಮಕ ಮಾಡಿದ್ದೇವೆ. 13,500 ಸಾವಿರ ಕಾಯಂ ಶಿಕ್ಷಕರ ನೇಮಕ ಮಾಡಿದ್ದೇವೆ. 53 ಸಾವಿರ ಕಾಯಂ ಶಿಕ್ಷಕರ ನೇಮಕಾತಿಯಾಗಬೇಕಿದೆ ಎಂದರು.
ನೀಟ್ ತರಬೇತಿ:12.50 ಕೋಟಿ ರೂ. ವೆಚ್ಚದಲ್ಲಿ ಮಕ್ಕಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಬಡ ಮಕ್ಕಳ ಎಂಜನಿಯರಿಂಗ್ ಹಾಗೂ ವೈದ್ಯಕೀಯ ಕನಸ್ಸು ನನಸು ಮಾಡುವುದು ಇದರ ಉದ್ದೇಶವಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲು ಅನುಕೂಲವಾಗಲಿದೆ. ಸಿಇಟಿ ತರಬೇತಿ ಕೂಡ ನೀಲಾಗುತ್ತದೆ ಎಂದು ತಿಳಿಸಿದರು.
30 ಸಾವಿರ ಮಕ್ಕಳ ದಾಖಲಾತಿ: ಅಂಗನವಾಡಿಯಲ್ಲೇ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿಯೇ 1008 ಸಾವಿರ ಎಲ್​ಕೆಜಿ ಹಾಗೂ ಯುಕೆಜಿ ನರ್ಸರಿ ತೆರೆಯಲಾಗುತ್ತದೆ. ಈಗಾಗಲೇ 30 ಸಾವಿರ ಮಕ್ಕಳು ದಾಖಲಾತಿ ಮಾಡಿಕೊಂಡಿದ್ದಾರೆ ಎಂದರು.
ಪ್ರತಿ ನಿತ್ಯ ಮೊಟ್ಟೆ:ಸರ್ಕಾರ ಶಾಲೆಗಳಿಗೆ ಉಚಿತ ವಿದ್ಯುತ್ ಕೊಟ್ಟಿದ್ದೇವೆ. ರಾಗಿ ಮಾಲ್ಟ್ ಕೊಡುತ್ತಿದ್ದೇವೆ. ಅಜೀಂ ಪ್ರೇಮ್ೕ ಮೊಟ್ಟೆ ಕೊಡಲು 1,500 ಕೋಟಿ ರೂ. ಕೊಟ್ಟಿದ್ದಾರೆ. ಆ.15ರಿಂದ ಪ್ರಾಯೋಗಿಕವಾಗಿ ಆರಂಭಿಸ ಲಾಗುತ್ತದೆ. ಸೆಪ್ಟೆಂಬರ್​ನಿಂದ ವಾರದ ಎಲ್ಲ ದಿನ ಮೊಟ್ಟೆ ಕೊಡಲು ಚಿಂತನೆ ನಡೆದಿದೆ ಎಂದು ಹೇಳಿದರು.
ಬ್ಯಾಗ್​ಲೆಸ್ ಡೇ ಕಡ್ಡಾಯ:ಆದರ್ಶ ಶಾಲೆಗಳಲ್ಲಿ ಪಿಯು ಕಾಲೇಜು ತೆರೆದು ಕಾಲೇಜು ಕೊರತೆ ನೀಗಿಸಲು ತೀರ್ಮಾನ ಮಾಡಿದ್ದೇವೆ. ತಿಂಗಳ ಮೂರನೇ ಶನಿವಾರ ಬ್ಯಾಗ್ ಲೆಸ್ ಡೇ ಇರುತ್ತದೆ. ಶಿಕ್ಷಕರು ಕಡ್ಡಾಯವಾಗಿ ಇದನ್ನು ಪಾಲಿಸಲು ಸೂಚಿಸಲಾಗಿದೆ. ಬ್ಯಾಗ್ ಲೆಸ್ ಮಾಡದೆ ಇದ್ದರೆ ಕಾನೂನು ಕ್ರಮ ತಗೆದುಕೊಳ್ಳುತ್ತೇವೆ. ಬ್ಯಾಗ್ ಹೊರೆ ಕಡಿಮೆ ಮಾಡಲು ಪಾರ್ಟ್ 1 ಪಾರ್ಟ್ 2 ಪಠ್ಯಕ್ರಮ ವಿಭಾಗ ಮಾಡಿದ್ದೇವೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
