ಬೆಂಗಳೂರು:ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮ-ಮಂಡಳಿ, ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್​ಲಾಗ್ ಹುದ್ದೆಗಳನ್ನು 3 ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ಈ ನೇಮಕ ಸಂಬಂಧ ವಾರದಲ್ಲಿ ಅಧಿಸೂಚನೆ ಹೊರಡಿಸಿ 3 ತಿಂಗಳಲ್ಲಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಬ್ಯಾಕ್​ಲಾಗ್ ಹುದ್ದೆ ನೇಮಕಾತಿ ಉಸ್ತುವಾರಿಗಾಗಿ ನೇಮಕಗೊಂಡಿರುವ ಉಪಸಮಿತಿ ಸಭೆಯಲ್ಲಿ ನಿರ್ದೇಶನ ನೀಡಿದರು.
ಕಾರಜೋಳ ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್, ಮೀನುಗಾರಿಕೆ ಸಚಿವ ಎಸ್. ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಬಿ. ಶ್ರೀರಾಮುಲು ಸದಸ್ಯರಾಗಿದ್ದಾರೆ. ಈ ಬ್ಯಾಕ್​ಲಾಗ್ ಹುದ್ದೆಗಳ ನೇಮಕಕ್ಕೆ ಕೈಗೊಂಡಿರುವ ಕ್ರಮಗಳನ್ನು ಸಮಿತಿ ವಿವರವಾಗಿ ಪರಿಶೀಲಿಸಿತು.
ಕಾಲೇಜುಗಳಲ್ಲಿ 882 ಹುದ್ದೆ:ರಾಜ್ಯ ಸರ್ಕಾರದ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ, ಅನುದಾನಿತ ತಾಂತ್ರಿಕ ಕಾಲೇಜುಗಳಲ್ಲಿ ಮತ್ತು ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ 436 ಸೇರಿ 882 ಹುದ್ದೆ ನೇಮಕ ಬಾಕಿ ಇದೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು. ಈ ಎಲ್ಲ ಹುದ್ದೆ ನೇಮಕಕ್ಕೆ ವಾರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಸಭೆ ಸೂಚಿಸಿತು. ಎಲ್ಲ ಇಲಾಖೆ ಮುಖ್ಯಸ್ಥರು, ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕೆಪಿಎಸ್ಸಿಗೆ ಕೋರಿಕೆ:ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕೈಗೊಳ್ಳಬೇಕಾದ ನೇಮಕಾತಿಗಳನ್ನು ವಾರದಲ್ಲಿ ಅಧಿಸೂಚಿಸಿ 6 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಸರ್ಕಾರಕ್ಕೆ ಆಯ್ಕೆ ಪಟ್ಟಿ ಸಲ್ಲಿಸಬೇಕೆಂದು ಆಯೋಗವನ್ನು ಕೋರಲು ಕ್ರಮ ಕೈಗೊಳ್ಳುವಂತೆ ಎಲ್ಲ ಇಲಾಖಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಯಿತು.
ವಿಜಯವಾಣಿ ವಿಜಯೋತ್ಸವ ವಿಜೇತರಿಗೆ ಬಹುಮಾನಗಳ ವಿತರಣೆ: ಕಾರು, ಬೈಕ್, ಫ್ರಿಜ್​ ಸೇರಿ ಹಲವು ಉಡುಗೊರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 10 =
Remember me
