ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕಳೆದ 2 ದಿನಗಳಿಂದ ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಸಿಸಲಾಗಿತ್ತು. ಈ ಅವಧಿಯಲ್ಲಿ ಭಾರಿ ಮಳೆಯಾಗಿತ್ತು. ಆದರೆ. ಮುಂದಿನ 2 ದಿನ ಸುರಿಯುತ್ತಿರುವ ಮಳೆಯ ಪ್ರಮಾಣ ತಗ್ಗಲಿದೆ. ಹೀಗಾಗಿ, ಸೆ.22ರಂದು ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಸೆ.22ರಂದು ಆರೆಂಜ್ ಅಲರ್ಟ್ ಇದ್ದರೆ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರಿನಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − three =
Remember me
