ಬೆಂಗಳೂರು:ಮುಂಗಾರು ಮಳೆ ಆರ್ಭಟದಿಂದಾಗಿ ಕೃಷಿ ಚಟುವಟಿಕೆಗಳು ಬಿರುಸಾಗಿ ಸಾಗುತ್ತಿರುವ ನಡುವೆಯೂ ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.
ಉಡುಪಿ, ಉತ್ತರ ಕನ್ನಡದಲ್ಲಿ ಜೂ 9ರಿಂದ ಜೂ 10ರವರೆಗೆ, ಧಾರವಾಡ, ಹಾವೇರಿಯಲ್ಲಿ ಜೂ 10ರಂದು ಅತಿ ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್​ ಅಲರ್ಟ್ ಘೋಷಿಸಿದೆ. ಈ ವೇಳೆ 204 ಮಿಮೀ ಮಳೆ ಸುರಿಯುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಗದಗದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಆರೆಂಜ್​ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗದಲ್ಲಿ ಜೂ 9ರಂದು ಯೆಲ್ಲೋ ಅರ್ಲಟ್​ ನೀಡಲಾಗಿದೆ.ದಕ್ಷಿಣ ಕರ್ನಾಟಕ ಭಾಗದ ಎರಡು ಜಿಲ್ಲೆ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.
ದಕ್ಷಿಣ ಕರ್ನಾಟಕ, ಕರಾವಳಿ, ಮಲೆನಾಡು ಭಾಗದಗಿಂತ ಉತ್ತರ ಕರ್ನಾಟಕ ಭಾಗದಲ್ಲಿ ಮಾನ್ಸೂನ್​ ಚುರುಕಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ವರುರ್ಣಾಭಟ ಜಾಸ್ತಿ ಇರುವ ಜತೆಗೆ ಗುಡುಗು, ಮಿಂಚು, ಬಿರುಗಾಳಿ ಕಾಣಿಸಿಕೊಳ್ಳಲಿದೆ. ಗಂಟೆಗೆ 40&50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.
ವಿಚ್ಛೇದಿತ ಪತ್ನಿ ನಿವೇದಿತಾಗೆ ಜೀವನಾಂಶ ನೀಡಿದ್ದಾರಾ ಚಂದನ್ ಶೆಟ್ಟಿ?
ನೀರಿನ ಮಟ್ಟ ಹೆಚ್ಚಳಭೀಕರ ಬರಗಾಲದಿಂದ ಬರಿದಾಗಿದ್ದ ಕೆಎಸ್​ಆರ್​ಎಸ್​ ಸೇರಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ದಿನದಿಂದ ದಿನಕ್ಕೆ ನೀರಿನ ಮಟ್ಟ ಹೆಚ್ಚುತ್ತಿದೆ. ಜತೆಗೆ, ಕೆರೆ&ಗುಂಟೆಗಳಿಗೂ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹಣೆಯಾಗುತ್ತಿದ್ದು, ಇದರಿಂದಾಗಿ ಅಂತರ್ಜಲ ಮಟ್ಟವೂ ಹೆಚ್ಚಳವಾಗಿದೆ. ಪೂರ್ವ ಮುಂಗಾರು ವರ್ಷಧಾರೆಯಿಂದ ಕೃಷಿ ಚಟುವಟಿಕೆ ಆರಂಭಿಸಲು ಅನುಕೂಲವಾಗಿತ್ತು. ಜೂ 2ರಿಂದ ಉತ್ತಮವಾಗಿ ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೃಷಿ ಚಟುವಟಿಕೆಗಳಿಗೆ ವರದಾನವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
