ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನ ಮುಂದುವರಿಯಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸೆ.19ರಂದು ಯೆಲ್ಲೋ, ಸೆ.20ರಂದು ಆರೆಂಜ್ ಹಾಗೂ ಸೆ.21 ಮತ್ತು ಸೆ.22ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ೋಷಿಸಲಾಗಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಶಿಮೊಗ್ಗದಲ್ಲಿ ಸೆ.19ರಂದು ಯೆಲ್ಲೋ ಅಲರ್ಟ್ ಇದ್ದರೆ, ಸೆ.20, 21ರಂದು ಆರೆಂಜ್ ಅಲರ್ಟ್ ಹಾಗೂ ಸೆ.22ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ೋಷಿಸಲಾಗಿದೆ. ಈ ಅವಧಿಯಲ್ಲಿ 204.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ತೀರುದದ್ದಕ್ಕೂ ಗಾಳಿ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಮುಂದಿನ 48 ದಿನ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಅಗಾಗ್ಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
