|ಮಂಜುನಾಥ ಕೆ.ಬೆಂಗಳೂರು
ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗೆ ಈ ಬಾರಿ ನೋಂದಣಿ ಮಾಡಿಕೊಂಡವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಮರು ಮೌಲ್ಯಮಾಪನಕ್ಕೆ ಹಾಗೂ ಉತ್ತರ ಪತ್ರಿಕೆಗಳ ಫೋಟೋ ಕಾಪಿಗೆ (ನಕಲು ಪ್ರತಿ) ನೋಂದಣಿ ಮಾಡಿಕೊಂಡವರ ಸಂಖ್ಯೆಯೂ ಕಡಿಮೆಯಾಗಿದೆ.
2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಶೇ.85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಇನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಜೂ.27 ರಿಂದ ಜು.4ರವರೆಗೆ ಪೂರಕ ಪರೀಕ್ಷೆಯನ್ನು ನಡೆಸಲು ಸಿದ್ಧತೆ ನಡೆಸಲಾಗಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಜೂ.10ರವರೆಗೆ ಇದ್ದ ಅವಧಿಯನ್ನೂ ಸಹ ವಿಸ್ತರಿಸಲಾಗಿತ್ತು. ಆದರೆ ಕಳೆದ ಎರಡು ವರ್ಷಕ್ಕೆ ಹೋಲಿಸಿದರೆ ಮರು ಮೌಲ್ಯಮಾಪನಕ್ಕೆ ಹಾಗೂ ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಂಡವರ ಸಂಖ್ಯೆ ಇಳಿಕೆಯಾಗಿದೆ. ಈ ವರ್ಷ ಪೂರಕ ಪರೀಕ್ಷೆಗೆ 93,887 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 2020ರಲ್ಲಿ ದುಪ್ಪಟು ನೋಂದಣಿ ಮಾಡಿಕೊಂಡಿದ್ದರು.

ಇನ್ನು ಫೋಟೋ ಕಾಪಿಗಾಗಿ 39,759 ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೆ 39,759 ಫೋಟೋ ಕಾಪಿಯನ್ನು ಇಲಾಖೆಯ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಲಾಗಿದೆ. ಮರು ಮೌಲ್ಯಮಾಪನಕ್ಕೆ ಈವರೆಗೂ 10,261 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 2020ರ ಸಾಲಿನಲ್ಲಿ ಮರು ಮೌಲ್ಯ ಮಾಪನಕ್ಕೆ 24,720, ಫೋಟೋ ಕಾಪಿಗಾಗಿ 89088 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.
2020 ಮತ್ತು 2022 ಹೋಲಿಕೆ ಮಾಡಿ ನೋಡಿದಾಗ ಪೂರಕ ಪರೀಕ್ಷೆ ಮತ್ತು ಫೋಟೋ ಕಾಪಿಗಾಗಿ ಅರ್ಜಿ ಸಲ್ಲಿಸಿದವರ ಪ್ರಮಾಣದಲ್ಲಿ ಶೇ.50 ಕಡಿಮೆಯಾಗಿದೆ. ಇದಕ್ಕೆ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಉತ್ತಮ ಫಲಿತಾಂಶ ಬಂದಿರುವುದೇ ಕಾರಣ.
|ಎಚ್.ಎನ್ ಗೋಪಾಲಕೃಷ್ಣಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
