ಬೆಂಗಳೂರುಮಾರ್ಚ್ 2024ರಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವಿದ್ಯಾರ್ಥಿಗಳ ನೋಂದಣಿಯನ್ನುಆರಂಭಿಸಿದೆ. ನೋಂದಣಿ ಕಾರ್ಯ ಮಂಗಳವಾರ ಆರಂಭವಾಗಿದ್ದು, ನ.4 ಕೊನೆಯ ದಿನವಾಗಿದೆ.
2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್ಸೆಸ್ಸೆಲ್ಸಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಪರೀಕ್ಷೆ-1ಕ್ಕೆ ಅರ್ಹ ಅಭ್ಯರ್ಥಿಗಳ ನೋಂದಣಿ ಮಾಹಿತಿಯನ್ನು ಮಂಡಳಿ ಜಾಲತಾಣ https://kseab.karnataka.gov.in/ ನಲ್ಲಿ ಶಾಲಾ ಲಾಗಿನ್ ಪಡೆಯಲು ಯೋಜಿಸಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ, ಮಾನ್ಯತೆ ಪಡೆದಿರುವ ಅನುದಾನಿತ ಮತ್ತು ಖಾಸಗಿ ಶಾಲೆಗಳು ಆಯಾ ಶಾಲೆಯ ಅಭ್ಯರ್ಥಿ, ಖಾಸಗಿ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಬಹುದು.
ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ ಲಾಗಿನ್‌ನಲ್ಲಿ ಮಂಡಳಿ ವತಿಯಿಂದ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ಬಳಸಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಬಹುದು. ಶಾಲಾ ವಿದ್ಯಾರ್ಥಿಗಳ ಮಾಹಿತಿ, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಬೇಕು.
ಶಾಲಾ ವಿದ್ಯಾರ್ಥಿಗಳ ಬಹುತೇಕ ಮಾಹಿತಿಯನ್ನು ಸ್ಯಾಟ್ಸ್ ದತ್ತಾಂಶದಿಂದ ಪಡೆಯುತ್ತಿರುವುದರಿಂದ ಅಭ್ಯರ್ಥಿಯ ಹೆಸರು, ತಂದೆ, ತಾಯಿ ಹೆಸರು, ಜನ್ಮ ದಿನಾಂಕ, ಪ್ರವರ್ಗ, ಲಿಂಗ, ಧರ್ಮ ಮತ್ತು ಮಾಧ್ಯಮ ಇವುಗಳಲ್ಲಿ ಯಾವುದೇ ತಿದ್ದುಪಡಿ ಇದ್ದಲ್ಲಿ ಮಂಡಳಿಯ ಜಾಲತಾಣದಲ್ಲಿ ನೇರವಾಗಿ ಮಾಡಲು ಸಾಧ್ಯವಿಲ್ಲ. ಸ್ಯಾಟ್ಸ್‌ನಲ್ಲಿ ತಿದ್ದುಪಡಿ ಮಾಡಿದ ನಂತರ ಮಂಡಳಿ ಶಾಲಾ ಲಾಗಿನ್‌ನಲ್ಲಿ ನೋಂದಣಿ ಮಾಡುವಂತೆ ಸಲಹೆ ನೀಡಿದೆ.
ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕು. ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕದಲ್ಲಿ ವಿನಾಯಿತಿ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 5 =
Remember me
