ಬೆಂಗಳೂರು:ಕಾಂಗ್ರೆಸ್​ನ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ, ಪ್ರತಿ ಮನೆಗೂ ಮಾಸಿಕ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಈಗಾಗಲೇ 51 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದು, ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ.
ಜುಲೈ ತಿಂಗಳ ಬಿಲ್​ಗೆ ಅನ್ವಯಿಸುವಂತೆ ಅಂದರೆ ಆಗಸ್ಟ್​ನಲ್ಲಿ ಬರುವ ಬಿಲ್​ನಲ್ಲಿ ನೋಂದಾಯಿತ ಗ್ರಾಹಕರು 200 ಯುನಿಟ್ ಒಳಗಿನ ವಿದ್ಯುತ್ ಬಳಸಿದ್ದರೆ ಅವರಿಗೆ ಶೂನ್ಯ ಬಿಲ್ ಬರಲಿದೆ. ಅಂದರೆ ಗೃಹಜ್ಯೋತಿ ಯೋಜನೆಗಾಗಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಇದನ್ನೂ ಓದಿ:ಭೀಕರ ಅಪಘಾತ: ಮಿನಿ ಬಸ್​ಗೆ ಮತ್ತೊಂದು ವಾಹನ ಡಿಕ್ಕಿ, ಒಬ್ಬ ಸ್ಥಳದಲ್ಲೇ ಸಾವು
ಕೆಲವರು ತಾವು ಭಾಗ್ಯಜ್ಯೋತಿ, ಕುಟೀರಜ್ಯೋತಿ ಅಥವಾ ಅಮೃತಜ್ಯೋತಿ ಯೋಜನೆಯ ಫಲಾನುಭವಿಗಳು ಎಂದು ಗೃಹಜ್ಯೋತಿಗೆ ಯೋಜನೆಗೆ ನೋಂದಣಿ ಮಾಡಿಸಿಕೊಂಡಿಲ್ಲ ಎಂಬುದು ವಿದ್ಯುತ್ ಸರಬರಾಜು ಕಂಪನಿಗಳ ಗಮನಕ್ಕೆ ಬಂದಿದ್ದು, ಆ ಕುರಿತು ಕಿವಿಮಾತನ್ನು ಹೇಳಿದೆ.
ನೀವು ಈಗಾಗಲೇ ಭಾಗ್ಯಜ್ಯೋತಿ, ಕುಟೀರಜ್ಯೋತಿ, ಅಮೃತಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದರೂ ಗೃಹಜ್ಯೋತಿಯ ಪ್ರಯೋಜನ ಪಡೆಯಲು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ವಿದ್ಯುತ್ ಸರಬರಾಜು ಕಂಪನಿಗಳು ತಿಳಿಸಿವೆ.
Consumers availing benefits under Bhagya Jyothi, Kutira Jyothi, and Amrutha Jyothi have to register again for Gruha Jyothi Scheme if they want to avail the benefits of Gruha Jyothi Scheme.@BescomTa@TATOMDBESCOM@mnreindia@MinOfPowerpic.twitter.com/jw6vqOc7yt
— Namma BESCOM (ನಮ್ಮ ಬೆಸ್ಕಾಂ) (@NammaBESCOM)June 26, 2023

ಮೊನ್ನೆ ಜಗ್ಗೇಶ್​ಗೆ ಕನ್ನಡ ಪಾಠ ಮಾಡಿದ್ದ ‘ಮೇಷ್ಟ್ರು’, ಇಂದು ಸಚಿವರು-ಸರ್ಕಾರಿ ಅಧಿಕಾರಿಗಳಿಗೂ ಕಿವಿಮಾತು

ಕೆಲಸ ಕಳೆದುಕೊಂಡ ಟೆಕ್ಕಿ ಈಗ ರ‌್ಯಾಪಿಡೊ ಚಾಲಕ; ಮತ್ತೆ ಸಾಫ್ಟ್​ವೇರ್ ಉದ್ಯೋಗಕ್ಕಾಗಿ ಹುಡುಕಾಟ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
