ಬೆಂಗಳೂರು:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬಿಲ್ಲುಗಳಿಗೆ ಹಣ ಬಿಡುಗಡೆ ಹಾಗೂ ಪ್ಯಾಕೇಜ್ ಪದ್ಧತಿಯಡಿ ಟೆಂಡರ್ ಪ್ರಕ್ರಿಯೆ ರದ್ದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ:ಗಗನಕ್ಕೇರಿದ ಪೆಟ್ರೋಲ್, ಡೀಸೆಲ್​​ ದರ! ಒಂದೇ ವಾರದಲ್ಲಿ ನಾಲ್ಕು ಬಾರಿ ಏರಿಕೆ
ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ಹಲವು ಕಾಮಗಾರಿಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ. ಇದರಿಂದ ಲಕ್ಷಕ್ಕೂ ಹೆಚ್ಚು ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಾಕಿ ಬಿಲ್ಲುಗಳಿಗೆ ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಉಪಯೋಗವಾಗಿಲ್ಲ. ಕೂಡಲೆ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ.
ರಾಜಕೀಯ ಪ್ರಭಾವ ಬಳಸಿ ಕೆಲ ಅಧಿಕಾರಿಗಳು, ಸರ್ಕಾರಿ ಟೆಂಡರ್‌ಗಳಲ್ಲಿ ಗುತ್ತಿಗೆದಾರರು ಭಾಗವಹಿಸದಂತೆ ನಿರ್ಬಂಧ ಹೇರುತ್ತಿದ್ದಾರೆ. ಇದರ ಹೊರತಾಗಿ ಗುತ್ತಿಗೆದಾರರು ಟೆಂಡರ್‌ನಲ್ಲಿ ಭಾಗವಹಿಸಿ ಬಿಡ್ ಸಲ್ಲಿಸಿದ ನಂತರವೂ ಟೆಂಡರ್ ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ. ಈ ಕ್ರಮದಿಂದ ಸ್ಪರ್ಧಾತ್ಮಕ ದರಗಳಲ್ಲಿ ಟೆಂಡರ್ ಬಿಡ್ ಆಗುತ್ತಿಲ್ಲ. ಇದರಿಂದ ತೆರಿಗೆ ಹಣ ವ್ಯರ್ಥವಾಗುತ್ತಿದೆ. ಅಲ್ಲದೆ, ಗುತ್ತಿಗೆದಾರರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 8 =
Remember me
