ಚಿಕ್ಕಮಗಳೂರು:ಮನುಷ್ಯನ ಬಾಳಿಗೆ ಧರ್ಮ ಶಾಶ್ವತ ನಂದಾದೀಪ.ಸಮಸ್ತ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ.ಮಾನವ ಜೀವನವನ್ನು ಶುದ್ಧ ಸುಂದರಗೊಳಿಸುವುದೇ ಗುರುವಿನ ಧರ್ಮ.ಬಾಳಿನ ಭಾಗ್ಯೋದಯಕ್ಕೆ ಗುರು ಕಾರುಣ್ಯ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಇತ್ತೀಚೆಗೆ ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಭಕ್ತಿ ಭಂಡಾರಿ ಶ್ರೀ ಬಸವೇಶ್ವರ ಜಯಂತ್ಯುತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಭೌತಿಕ ಬದುಕಿಗೆ ಆಧ್ಯಾತ್ಮದ ಅರಿವು ಮುಖ್ಯ.ಮೌಲ್ಯಾಧಾರಿತ ಬದುಕಿಗೆ ಧರ್ಮಾಚರಣೆಯ ಅಗತ್ಯವಿದೆ.ಮಾನವನನ್ನು ಪರಿಪೂರ್ಣದೆಡೆಗೆ ಕರೆದೊಯ್ಯುವುದೇ ನಿಜವಾದ ಧರ್ಮ.ಹಣ ಕೆಟ್ಟ ಚಟ ಕಲಿಸುತ್ತದೆ.ಹಸಿವು ಬದುಕಿನ ಪಾಠ ಕಲಿಸುತ್ತದೆ.ಹಣ ಮಾನವೀಯತೆ ಮರೆಸಿದರೆ ಹಸಿವು ಅರಿವನ್ನು ಮೂಡಿಸುವ ಕಾರ್ಯ ಮಾಡುತ್ತದೆ.ಮನೆ ಅಂಗಳದ ಕಸ ಯಾರಾದರೂ ಹಸನಗೊಳಿಸಬಹುದು.ಆದರೆ ಮನದಂಗಳದ ಕಸವನ್ನು ನಾವೇ ಹಸನ ಮಾಡಿಕೊಳ್ಳಬೇಕಾಗುತ್ತದೆ.ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ ಸಿದ್ಧಾಂತಗಳು ಮತ್ತು ಶ್ರೀ ಬಸವಣ್ಣನವರ ಧಾರ್ಮಿಕ ಮತ್ತು ಸಾಮಾಜಿಕ ಚಿಂತನಗಳು ಜೀವ ಜಗತ್ತಿಗೆ ಸಂಜೀವಿನಿಯಾಗಿವೆ.ಫಲಭರಿತ ಬಾಳೆಯಂತೆ ಮನುಷ್ಯ ಬಾಗಬೇಕಲ್ಲದೇ ಬೀಗಬಾರದು.ದೇವರಿಗೆ ಕೊಡುವುದೂ ಗೊತ್ತು.ಕೊಟ್ಟಿದ್ದನ್ನು ಕಿತ್ತುಕೊಳ್ಳುವುದೂ ಗೊತ್ತು.ಆದ್ದರಿಂದ ಮನುಷ್ಯ ಗುರು ಹಿರಿಯರ ಮತ್ತು ಸಜ್ಜನ ಸತ್ಪುರುಷರ ಮಾರ್ಗದರ್ಶನದಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕೆಂದರು.
ನೇತೃತ್ವ ವಹಿಸಿದ ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳು ಜ್ಯೋತಿ ಬೆಳಗಿಸಿ ಧರ್ಮ ಸಮಾರಂಭ ಉದ್ಘಾಟಿಸಿದರು.ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಮತ್ತು ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ,ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ,ಎ.ಬಿ.ಸುದರ್ಶನ್ ಸಿ.ವಿ.ಮಲ್ಲಿಕಾರ್ಜುನ್,ಎಂ.ಡಿ.ಪುಟ್ಟಸ್ವಾಮಿ,ಎಸ್.ಎಂ.ದೇವಣ್ಣಗೌಡ,ಎ.ಎಸ್.ಸೋಮಶೇಖರಯ್ಯ,ಹೆಚ್.ಎಸ್.ನಂಜೇಗೌಡ,ಯು.ಎಂ.ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.
ಸಮಾರಂಭಕ್ಕೂ ಮುನ್ನ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜಾ ಜರುಗಿತು.ಇದೇ ಸಂದರ್ಭದಲ್ಲಿ ಹಲವಾರು ವೀರಮಾಹೇಶ್ವರ ಜಂಗಮ ವಟುಗಳಿಗೆ ವೀರಶೈವ ಧರ್ಮ ಪರಂಪರೆಯಂತೆ ಶಂಕರದೇವರ ಮಠದ ಚಂದ್ರಶೇಖರ ಶ್ರೀಗಳು ಶಿವದೀಕ್ಷಾ ನೆರವೇರಿಸಿ ಮಂತ್ರೋಪದೇಶಗೈದರು.ಸಮಾರಂಭದ ನಂತರ ಆಗಮಿಸಿದ ಎಲ್ಲಾ ಭಕ್ತರಿಗೆ ಅನ್ನ ದಾಸೋಹ ಜರುಗಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
