ಬೆಂಗಳೂರು:ಮನುಷ್ಯನ ಉದ್ಧಾರಕ್ಕೆ ಧರ್ಮಗಳು ಇರುತ್ತವೆ ಹೊರತು ಮಾನವನಲ್ಲಿ ಸಂಘರ್ಷ ಉಂಟು ಮಾಡುವುದಕ್ಕೆ ಅಲ್ಲ. ಯಾವುದೇ ಧರ್ಮ ಸಂಘರ್ಷಕ್ಕೆ ಏಡೆ ಮಾಡಿಕೊಡುತ್ತದೆಯೋ ಅದು ಧರ್ಮವೇ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಷ್ಟ್ರೀಯ ಬಸವ ಪ್ರತಿಷ್ಠಾನ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಸರ್ವಧರ್ಮ ಸಂಸತ್-2022’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲ ಧರ್ಮಗಳ ಉದ್ದೇಶ ಮಾನವನ ಅಭಿವೃದ್ಧಿ. ಎಲ್ಲ ಧರ್ಮಗಳು ಹೇಳುವುದು ಒಂದೆಯಾದರೂ, ಕೆಲ ಸಂದರ್ಭಗಳಲ್ಲಿ ದಾರಿ ತಪ್ಪುವ ಸಾಧ್ಯತೆಗಳು ಇರುತ್ತದೆ. ಹಾಗಾಗಿ ಎಲ್ಲ ಧರ್ಮಗಳ ಮೂಲವನ್ನು ನಂಬಿ ನಾವು ಬದುಕಬೇಕಾಗುತ್ತದೆ. ಜಗದ್ಗುರು ಬಸವಣ್ಣ ನಮ್ಮ ಜೀವನದ ಎಲ್ಲ ಸಮಸ್ಯೆಗಳಿಗೆ ಸುಲಭವಾಗಿ ಪರಿಹಾರ ನೀಡಿದ್ದಾರೆ. ಅವುಗಳನ್ನು ಅನುಕರಣೆ ಮಾಡುವ ಅವಶ್ಯಕತೆ ಇದೆ. ಬಸವಣ್ಣನವರು ‘ಕಾಯಕವೇ ಕೈಲಾಸ’ ಎಂದು ಹೇಳಿದ್ದಾರೆ. ಪೂಜೆಗಿಂತ ಕಾಯಕ ದೊಡ್ಡದು. ಯಾವ ಸಮಾಜದಲ್ಲಿ ಕಾಯಕ ಅತ್ಯಂತ ಶ್ರೇಷ್ಠ ಸ್ಥಾನ ಪಡೆಯುತ್ತದೆಯೋ ಅಲ್ಲಿ ಬಡತನ ಇರುವುದಿಲ್ಲ ಎಂದು ಸಿಎಂ ಹೇಳಿದರು.
ಹುಟ್ಟುವಾಗ ನಮಗೆ ಯಾವುದೇ ಧರ್ಮ ಇರುವುದಿಲ್ಲ. ಈ ಜಗತ್ತು ಅನ್ನು ನಾವು ಬಿಟ್ಟು ಹೋಗುವಾಗ ಯಾವುದೇ ಧರ್ಮ ಇರುವುದಿಲ್ಲ. ಆದರೆ ಬದುಕಿನಲ್ಲಿ ಹತ್ತು ಹಲವು ಜಾತಿ, ಉಪಜಾತಿ, ಪಂಗಡಗಳು ಇರುತ್ತದೆ. ಇದನ್ನು ಕಾಲ ಕಾಲಕ್ಕೆ ಮನುಷ್ಯರು ಮಾಡಿಕೊಂಡಿರುವ ವ್ಯವಸ್ಥೆ. ಈ ವ್ಯವಸ್ಥೆಯ ವ್ಯಾಪ್ತಿ ಮತ್ತು ಅದರ ಅವಶ್ಯಕತೆ ಏನು ಎಂಬುದು ಮುಖ್ಯವಾಗುತ್ತದೆ ಎಂದು ಸಿಎಂ ವಿವರಿಸಿದರು.
ಸಚಿವ ವಿ.ಸೊಮಣ್ಣ, ಶಾಸಕ ರಾಜುಗೌಡ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನಾಗಮೊಹನ್ ದಾಸ್, ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್, ಸಾಣೇಹಳ್ಳಿಯ ತರಳಬಾಳು ಶಾಖಾಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ, ಪ್ರತಿಷ್ಠಾನ ಅಧ್ಯಕ್ಷ ಎಸ್.ಎಂ. ಸುರೇಶ್ ಮತ್ತಿತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 20 =
Remember me
