ಕುರುಗೋಡು(ಬಳ್ಳಾರಿ):ಪಟ್ಟಣದ ದೊಡ್ಡಬಸವೇಶ್ವರ ಸಿನಿಮಾ ಟಾಕೀಸ್​ನಲ್ಲಿ ಅಭ್ಯಾಸ ಮಾಡುತ್ತಿರುವ ಗಾಂಧಿ ತತ್ವಾಧಾರಿತ ವಸತಿ ಶಾಲೆ ಮಕ್ಕಳನ್ನು ಕೋಳೂರಿನ ಖಾಸಗಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡಕ್ಕೆ ಸ್ಥಳಾಂತರಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಸೂಚಿಸಿದರು.
ಮಕ್ಕಳು ಸಿನಿಮಾ ಟಾಕೀಸ್​ನಲ್ಲಿ ಕಲಿಯುತ್ತಿರುವ ಬಗ್ಗೆ ಬುಧವಾರ ‘ವಿಜಯವಾಣಿ’ ರಿಯಾಲಿಟಿ ಚೆಕ್ ವರದಿ ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಟಾಕೀಸ್​ನಲ್ಲಿ 6 ರಿಂದ 10ನೇ ತರಗತಿ 226 ವಿದ್ಯಾರ್ಥಿಗಳು ಹಲವು ತೊಂದರೆ ಅನುಭವಿಸುತ್ತಿದ್ದಾರೆ. ಸುತ್ತಮುತ್ತಲಿನ ವಾತಾವರಣ ಅನೈರ್ಮಲ್ಯದಿಂದ ಕೂಡಿದ್ದು, ಕೂಡಲೇ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಖಾಸಗಿ ಪಾಲಿಟೆಕ್ನಿಕ್ ಕಾಲೇಜಿಗೆ ಕ್ರೈಸ್ ಇಂಜಿನಿಯರ್ ಭೇಟಿ ನೀಡಿ ಕಟ್ಟಡ ಪರಿಶೀಲಿಸಲಿದ್ದಾರೆ. ಬಳಿಕ ಮಕ್ಕಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಜಾಲಪ್ಪ ತಿಳಿಸಿದರು. ಶಶಿಧರ್ ಕೋಸಂಬೆ ವಿದ್ಯಾರ್ಥಿಗಳೊಂದಿಗೆ ರ್ಚಚಿಸಿದರು.
ಕಟ್ಟಡವನ್ನು ಕ್ರೖೆಸ್ ಇಂಜಿನಿಯರ್ ಪರಿಶೀಲಿಸಲಿದ್ದು, ಬಳಿಕ ಮಕ್ಕಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎ.ಕೆ. ಜಲಾಲಪ್ಪ ತಿಳಿಸಿದ್ದಾರೆ.
ಮಕ್ಕಳಿಗೆ ಸೂರು ಸಮಸ್ಯೆ ನೂರಾರು: ವಸತಿ ಶಾಲೆ, ಹಾಸ್ಟೆಲ್​ಗಳ ವಸ್ತುಸ್ಥಿತಿ ಅನಾವರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 12 =
Remember me
