| ಎನ್.ಎಲ್.ಶಿವಮಾದು ಬೆಂಗಳೂರುರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಪಠ್ಯಕ್ರಮ ಶಾಲೆಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕಳೆದ ವರ್ಷಕ್ಕಿಂತ ಗಣನೀಯವಾಗಿ ಕುಸಿದಿದೆ. ಕಳೆದ ವರ್ಷಕ್ಕಿಂತ ಈ ಬಾರಿ 4 ಲಕ್ಷ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಆದರೆ, ಇಷ್ಟು ಪ್ರಮಾಣದಲ್ಲಿ ಮಕ್ಕಳ ಸಂಖ್ಯೆ ಕುಸಿಯಲು ಕಾರಣವೇನು ಎಂಬುದರ ಬಗ್ಗೆ ಇನ್ನಷ್ಟೇ ಶಿಕ್ಷಣ ಇಲಾಖೆ ಪತ್ತೆ ಹಚ್ಚಬೇಕಿದೆ.
ಶಾಲೆಗಳು ಆರಂಭವಾಗಿ ಎರಡು ತಿಂಗಳು ಕಳೆದಿದೆ. 1ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ವಿದ್ಯಾರ್ಥಿ ಸಾಧನೆ ಟ್ರಾ್ಯಕಿಂಗ್ ವ್ಯವಸ್ಥೆಗೆ (ಸ್ಯಾಟ್ಸ್) ಸಲ್ಲಿಸಲು ಜು.31 ಕೊನೆಯ ದಿನವಾಗಿತ್ತು. ಅದರಂತೆ ಜು.31ರ ಮಾಹಿತಿ ಪ್ರಕಾರ ರಾಜ್ಯದಲ್ಲಿ 1,01,51,162 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಕಳೆದ ವರ್ಷ 1,06,45,000 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು.
ಕುಸಿಯಲು ಕಾರಣವೇನು?:ರಾಜ್ಯದ ಶಿಕ್ಷಣ ಇಲಾಖೆ ಶಾಲೆಗಳಿಗೆ ಸರಾಸರಿ 1.4 ಕೋಟಿಯಿಂದ 1.5 ಕೋಟಿ ಮಕ್ಕಳು ಸೇರ್ಪಡೆಯಾಗುತ್ತಾರೆ. ಆದರೆ, ಹಿಂದಿನ 2 ವರ್ಷ ಕರೊನಾ ಕಾರಣದಿಂದ ಶುಲ್ಕ ಕಡಿಮೆ ಎಂಬ ಕಾರಣಕ್ಕಾಗಿ ರಾಜ್ಯ ಪಠ್ಯಕ್ರಮ ಶಾಲೆಗಳಿಗೆ ಮಕ್ಕಳನ್ನು ಪಾಲಕರು ಸೇರ್ಪಡೆ ಮಾಡಿದ್ದರು. ಕರೊನಾ ಬಳಿಕ ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮಕ್ಕೆ ಸೇರ್ಪಡೆ ಸಂಖ್ಯೆ ಹೆಚ್ಚಳವಾಗಿದೆ ಎನ್ನಲಾಗಿದೆ.
ಒಂದನೇ ತರಗತಿ ದಾಖಲಾತಿಗೆ 6 ವರ್ಷ ಕನಿಷ್ಠ ವಯೋಮಾನವನ್ನು ನಿಗದಿ ಮಾಡಲಾಗಿದೆ. ಈ ನಿಯಮವು ರಾಜ್ಯದಲ್ಲಿ 2025-26ನೇ ಸಾಲಿನಿಂದ ಆಧಿಕೃತವಾಗಿ ಜಾರಿಗೆ ಬರಲಿದೆ. ಆದರೂ ಖಾಸಗಿ ಶಾಲೆಗಳಲ್ಲಿ ಈಗಾಗಲೆ ಜಾರಿಗೊಳಿಸಿರುವ ಕಾರಣ ಮಕ್ಕಳ ಸಂಖ್ಯೆ ಕುಸಿತಕ್ಕೆ ಕಾರಣವಾಗಿದೆ. ವಯೋಮಿತಿ ಕಾರಣಕ್ಕೆ ನರ್ಸರಿಯಲ್ಲಿಯೇ ಮಕ್ಕಳು ಉಳಿಯುವಂತಾಗಿದೆ. ಹಿಂದೆಲ್ಲ ಹಲವು ಖಾಸಗಿ ಶಾಲೆಗಳು ಪ್ರತಿಷ್ಠೆಗಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಶಿಕ್ಷಣ ಇಲಾಖೆಗೆ ಮಾಹಿತಿ ನೀಡುತ್ತಿದ್ದರು. ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ ಸೇರಿ ಇತರ ಸರ್ಕಾರಿ ಸೌಲಭ್ಯಗಳನ್ನು ಪಡೆಯುವುದಕ್ಕಾಗಿ ನಕಲು ವಿದ್ಯಾರ್ಥಿಗಳ ಮಾಹಿತಿ ನೀಡುತ್ತಿದ್ದರು. ಆದರೆ, ಸೇರ್ಪಡೆಯಾಗುವ ಎಲ್ಲ ವಿದ್ಯಾರ್ಥಿಗೂ ಆಧಾರ್ ನಂಬರ್ ಕಡ್ಡಾಯಗೊಳಿಸಿರುವ ಕಾರಣ, ಪ್ರತಿ ವಿದ್ಯಾರ್ಥಿಗೂ ಸ್ಯಾಟ್ಸ್ ನಂಬರ್ ನೀಡುತ್ತಿರುವ ಕಾರಣ ಮಕ್ಕಳ ನಕಲು ಮಾಹಿತಿ ನೀಡಲು ಸಾಧ್ಯವಾಗುತ್ತಿಲ್ಲ.
ಇತ್ತೀಚಿನ ವರ್ಷಗಳಲ್ಲಿ ಕಲೆ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳು ‘ಓಪನ್ ಸ್ಕೂಲ್’ಗಳನ್ನು ಸೇರುತ್ತಿದ್ದು, ರೆಗ್ಯುಲರ್ ಸ್ಕೂಲ್​ಗಳಿಂದ ದೂರ ಉಳಿಯುತ್ತಿದ್ದಾರೆ. ಕರೊನಾ ಬಳಿಕ ಬದಲಾದ ಜೀವನ ಶೈಲಿ ಹಾಗೂ ವೃತ್ತಿಯಿಂದ ವಲಸೆ ನೀತಿ ಹೆಚ್ಚಳವಾಗುತ್ತಿದ್ದು, ಈ ಕಾರಣದಿಂದಲೂ ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡುವವರಲ್ಲಿ ವ್ಯತ್ಯಾಸಗಳಾಗಿರಬಹುದು ಎಂದು ಮಕ್ಕಳ ತಜ್ಞರೊಬ್ಬರು ಮಾಹಿತಿ ನೀಡಿದ್ದಾರೆ.
ಅವಧಿ ವಿಸ್ತರಿಸಿದ ಇಲಾಖೆ:ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಮಾಹಿತಿ ನೀಡುವ ಅವಧಿಯನ್ನು ಜು.31ರ ವರೆಗೆ ವಿಸ್ತರಿಸಿತ್ತು, ಇದೀಗ ಮತ್ತೊಮ್ಮೆ ಈ ಅವಧಿಯನ್ನು ಆ.31ರ ವರೆಗೆ ವಿಸ್ತರಿಸಿದೆ.
ಯಾವುದೇ ಪಾಲಕರು ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡದಿರಲು ಸಾಧ್ಯವಿಲ್ಲ. ಮಕ್ಕಳ ಸಂಖ್ಯೆ ಕುಸಿಯಲು ಕಾರಣವೇನೆಂಬುದನ್ನು ಪತ್ತೆ ಹಚ್ಚುತ್ತೇವೆ. ಮಾಹಿತಿ ನೀಡಲು ಮತ್ತೆ ಒಂದು ತಿಂಗಳು ಸಮಯ ನೀಡಿರುವುದರಿಂದ ಸಂಖ್ಯೆಯಲ್ಲಿ ವ್ಯತ್ಯಾಸವಾಗಲಿದೆಯೇ ಎಂಬುದನ್ನು ತಿಳಿದುಕೊಳ್ಳುತ್ತೇವೆ.
| ಬಿ.ಬಿ. ಕಾವೇರಿ, ಆಯಕ್ತರು, ಶಾಲಾ ಶಿಕ್ಷಣ ಇಲಾಖೆ

ಮದುವೆಯಾಗುವ ಕನಸು ಚಿಗುರಿಸಿದ ಟೊಮ್ಯಾಟೋ; ಹುಡುಗಿ ಹುಡುಕಲು ಮುಂದಾದ ಕೃಷಿಕ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 1 =
Remember me
