ಬೆಂಗಳೂರು:ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್ ಅಂಡ್ ಗ್ಯಾಂಗ್​ ಜೈಲಿನಲ್ಲಿದೆ. ದರ್ಶನ್ ಮೇಲಿನ ಅಭಿಮಾನದಿಂದ 8ನೇ ಆರೋಪಿ ರವಿ ಕುಟುಂಬ ಭಾರೀ ಕಷ್ಟಗಳನ್ನು ಎದುರಿಸುತ್ತಿದೆ.
ರವಿ ಜೈಲು ಪಾಲಾಗಿದ್ದಾನೆ. ರವಿ ಮನೆಯ ಎಲ್ಲ ವ್ಯವಹಾರ ನೋಡಿಕೊಳ್ಳುತ್ತಿದ್ದ. ಆದರೆ ರವಿ ಜೈಲು ಸೇರಿದ ಮೇಲೆ ಮನೆಯ ಆರ್ಥಿಕ ಸ್ಥಿತಿ ತೀರ ಹದಗೆಟ್ಟಿದೆ. ರವಿಯ ಹೆಂಡತಿ ಕವಿತಾ ಅವರು ಶಾಲೆಯ ಫೀಸು ಕಟ್ಟಲಾಗದೇ ಮಕ್ಕಳ ಶಾಲೆ ಬಿಡಿಸಿದ್ದು ಮನೆಯ ಆರ್ಥಿಕ ಪರಿಸ್ಥಿತಿಯು ಹದಗೆಟ್ಟಿದ್ದು ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ. ದರ್ಶನ್ ಮೇಲಿನ ಅಭಿಮಾನಕ್ಕೆ ಕುಟುಂಬವೊಂದು ಇದೀಗ ಬೀದಿಗೆ ಬಂದು ನಿಂತಿದೆ.
ರವಿ ತಾಯಿ ಕೆಂಚಮ್ಮಗೆ ಕಣ್ಣಿಲ್ಲ, ಇವರಿಗೆ ಮಾತ್ರೆ ತಂದು ಕೊಡುವುದಕ್ಕೂ ಮನೆಯಲ್ಲಿ ಯಾರೂ ಇಲ್ಲ. ಮನೆಯಲ್ಲಿ ಏಕಾಂಗಿಯಾಗಿ ಬದುಕು ಸಾಗಿಸುತ್ತಿದ್ದಾರೆ. ಯಾರಾದರು ಹಣ ಕೊಟ್ಟರೆ ಮಾತ್ರ ಕೆಂಚಮ್ಮಗೆ ಔಷಧಿ, ಮಾತ್ರೆಗಳು ಲಭ್ಯವಾಗುತ್ತವೆ. ಹೀಗಾಗಿ ತನ್ನ ಮಗನ ಬರುವಿಕೆಗೆ ತಾಯಿ ಕಾಯುತ್ತಿದ್ದಾಳೆ.
ರವಿ ಪತ್ನಿ ಕವಿತಾ ಮಾತನಾಡಿ.. ಮನೆಯಲ್ಲಿ ದುಡಿಯೋರೆ ಇಲ್ಲವೆಂದರೆ ಶಾಲೆಗೆ ದುಡ್ಡು ಕಟ್ಟುವುದು ಹೇಗೆ? ದುಡ್ಡಿಲ್ಲದ ಕಾರಣ ಮಕ್ಕಳ ಶಾಲೆ ಬಿಡಿಸಿದ್ದೇನೆ. ಈಗ ಮಕ್ಕಳು ಮನೆಯಲ್ಲೇ ಇರುತ್ತಾರೆ. ಒಬ್ಬ ಮಗ 3ನೇ ತರಗತಿಯಲ್ಲಿ ಓದುತ್ತಿದ್ದಾನೆ, ಸಣ್ಣವನು ಎಲ್​​ಕೆಜಿಗೆ ಹೋಗುತ್ತಿದ್ದ. ನಮಗೆ ಮುಂದಿನ ಭವಿಷ್ಯ ಅಂದರೆ ಮಕ್ಕಳೇ. ಮಕ್ಕಳು ಶಾಲೆಗೆ ಹೋದರೆ ಟೀಚರ್ ಯಾವ ರೀತಿ ನೋಡುತ್ತಾರೆ ಎನ್ನುವ ಪರಿಸ್ಥಿತಿ ಬಂದಿದೆ. ನಾವು ಏನೂ ತಪ್ಪು ಮಾಡಿಲ್ಲ. ಆದರೂ ಇಂತಹ ಅಪವಾದ ಇದೆ. ಶಾಲೆಯವರು ಫೋನ್ ಮಾಡಿ ಯಾಕೆ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿಲ್ಲ ಎಂದು ಕೇಳುತ್ತಿದ್ದಾರೆ ಅಂತ ಹೇಳಿದ್ದಾರೆ.
ನಮ್ಮ ಮನೆಯವರು ಬಾಡಿಗೆಗೆ ಅಂತ ಹೋಗಿದ್ದಾರೆ. ಆದರೆ ಅವರನ್ನ ಬಿಟ್ಟು ಕಳುಹಿಸಿದರೆ ಆಯಿತಲ್ಲ. ಅವರನ್ನ ಯಾಕೆ ಹಿಡಿದುಕೊಳ್ಳಬೇಕು. ನನ್ನ ಗಂಡನಿಗೆ ದುಡ್ಡು ಕೊಡುತ್ತಿವಿ. ಅಪ್ರೂವಲ್ ಆಗು ಎಂದೆಲ್ಲ ಕೇಳಿದ್ದಾರೆ. ಆದರೆ ನಮ್ಮ ಮನೆಯವರು ಅಂತವರಲ್ಲ. ಹೆಂಡತಿ, ಮಕ್ಕಳಿದ್ದಾರೆ ಎಂದು ಅವರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?:ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಮಹತ್ವದ ಆದೇಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮತ್ತು ಆತನ ಸಹಚರ ಪ್ರದೋಷ್‌  ಇಬ್ಬರ ಬಳಿಯೂ ಪರವಾನಗಿ ಹೊಂದಿದ  ಯುಎಸ್ ಮೇಡ್ ಪಿಸ್ತೂಲ್‌ಗಳಿದ್ದು, ಲೋಕಸಭೆ ಚುನಾವಣೆ  ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ  ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.
ರೇಣುಕಾಸ್ವಾಮಿ ಹೀರೋ ಮಾಡೋದು ನಿಲ್ಸಿ! ಜನ ಸಾವಿರ ಮಾತನಾಡಲಿ ದರ್ಶನ್‌ನ ಬಿಟ್ಟುಕೊಡಲ್ಲ ಎಂದ VJ ಹೇಮಾಲತಾ

VIDEO | ವಯಸ್ಸು ಕೇವಲ ಅಂಕೆ, 70 ವರ್ಷದ ಈ ಅಜ್ಜಿ ಇಂದಿನ ಯುವಕರಿಗೆ ಸ್ಫೂರ್ತಿ…
VIDEO | ವಯಸ್ಸು ಕೇವಲ ಅಂಕೆ, 70 ವರ್ಷದ ಈ ಅಜ್ಜಿ ಇಂದಿನ ಯುವಕರಿಗೆ ಸ್ಫೂರ್ತಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − six =
Remember me
