ಬಾಳೆಹೊನ್ನೂರು:ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದಲ್ಲಿ ಮಾ.5ರಿಂದ 10ರವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ.
ಪ್ರತಿದಿನ ಸಂಜೆ 6.30ಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. 5ರಂದು ಧ್ವಜಾರೋಹಣ ಮತ್ತು ಹರಿದ್ರಾಲೇಪನದೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. 6ರಂದು ಶಿವಾದ್ವೈತ ಧರ್ಮ ಪರಿಷತ್ ಅನ್ನು ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪಸಭಾಪತಿ ಎಸ್.ಎಲ್.ಧಮೇಗೌಡ, ಶಾಸಕರಾದ ಬೆಳ್ಳಿ ಪ್ರಕಾಶ್, ಡಿ.ಎಸ್.ಸುರೇಶ್, ಹರಿಹರ ಮಾಜಿ ಶಾಸಕ ಎಚ್.ಎಸ್.ಶಿವಶಂಕರ ಭಾಗವಹಿಸುವರು. ಮುಕ್ತಿಮಂದಿರದ ವಿಮಲ ರೇಣುಕ ವೀರಮುಕ್ತಿಮುನಿ ಶ್ರೀಗಳು ನೇತೃತ್ವ ವಹಿಸುವರು. ಸಿಂಧನೂರು ಸೋಮನಾಥ ಶ್ರೀ, ಬೆಳಗುಂಪದ ಅಭಿನವ ಪರ್ವತೇಶ್ವರ ಶ್ರೀ ಆಶೀರ್ವಚನ ನೀಡುವರು.
7ರಂದು ಬೆಳಗ್ಗೆ ಧರ್ಮ ಸಮಾ ರಂಭವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ‘ರಂಭಾಪುರಿ ಬೆಳಗು’ ಬಿಡುಗಡೆ ಮಾಡುವರು. ಸಚಿವರಾದ ಸಿ.ಟಿ. ರವಿ, ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಟಿ.ಡಿ.ರಾಜೇಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಥಣಿಯ ಬಸವರಾಜ ಶಂಕರ ಉಮರಾಣಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಾನಿಹಳ್ಳಿ ಮಳೆಶಿವಯೋಗೀಶ್ವರ ಶ್ರೀ ಆಶೀರ್ವಚನ ನೀಡುವರು.
8ರ ಸಂಜೆ ಶಿವಾದ್ವೈತ ಧರ್ಮ ಪರಿಷತ್​ನಲ್ಲಿ ಕೃಷಿ ಸಚಿವ ಸಿ.ಸಿ.ಪಾಟೀಲ್, ಶಾಸಕ ಎಂ.ಪಿ. ಕುಮಾರಸ್ವಾಮಿ, ಮಾಜಿ ಎಂಎಲ್​ಸಿ ಗಾಯತ್ರಿ ಶಾಂತೇಗೌಡ, ಚಿಕ್ಕಮಗಳೂರು ಮಹಿಳಾ ಸಮಾಜದ ಅಧ್ಯಕ್ಷೆ ಗೌರಮ್ಮ ಬಸವೇಗೌಡ ಭಾಗವಹಿಸುವರು. ಆಲಮೇಲದ ಚಂದ್ರಶೇಖರ ಶ್ರೀ ಆಶೀರ್ವಚನ ನೀಡುವರು. 9ರ ಸಂಜೆ ಶಿವಾದ್ವೈತ ಧರ್ಮ ಪರಿಷತ್​ನಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಚಿವರಾದ ಡಿ.ಎನ್.ಜೀವರಾಜ್, ಬಿ.ಬಿ.ನಿಂಗಯ್ಯ, ಎಂಎಲ್ಸಿ ಎಂ.ಕೆ.ಪ್ರಾಣೇಶ್, ಬಾಳೆಹೊನ್ನೂರಿನ ಎಂ.ಎಸ್.ಚನ್ನಕೇಶವ, ಬಿ.ಸಿ.ಗೀತಾ ಭಾಗವಹಿಸುವರು. ವಿಭೂತಿಪುರ ಮಠದ ಡಾ. ಮಹಾಂತಲಿಂಗ ಶ್ರೀ, ಹಲಗೂರು ರುದ್ರಮುನಿ ಶ್ರೀ ಆಶೀರ್ವಚನ ನೀಡುವರು. 7ರ ಸಂಜೆ ಸಂಗೀತ ಸೌರಭ, ರಾತ್ರಿ 10.30ಕ್ಕೆ ‘ಕಣ್ಣೀರಲ್ಲಿ ಕರಗಿದ ಮಾಂಗಲ್ಯ’ ಸಾಮಾಜಿಕ ನಾಟಕ ಪ್ರದರ್ಶನ ಏರ್ಪಡಿಸ ಲಾಗಿದೆ. 8ರಂದು ಬಸವನಕೋವಿಯಲ್ಲಿ ಕೆಂಡಾರ್ಚನೆ, 9ರಂದು ವಸಂತೋತ್ಸವ, 10ರಂದು ಭದ್ರಾ ನದಿ ತೀರದಲ್ಲಿ ಸುರಗಿ ಸಮಾರಾಧನೆ ನೆರವೇರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
