ಬೆಂಗಳೂರು:ಸಂಘಟನೆ ಮತ್ತು ಪಕ್ಷ ತಾಯಿ ಸಮಾನ. ನನಗೆ ಅನ್ಯಾಯವಾದ ಬಗ್ಗೆ ನಮ್ಮ ನಾಯಕರ ಮುಂದೆ ಹೇಳಿಕೊಂಡಿದ್ದೇನೆ. ಸಂಪುಟದಲ್ಲಿ ಕೆಲವರಿಗೆ ಎರಡು ಮೂರು ಖಾತೆಗಳಿವೆ. ಹಾಗಂತ ನನಗೆ ಅಸಮಾಧಾನವಿಲ್ಲ. ಇನ್ನು 6 ಖಾತೆಗಳು ಖಾಲಿ ಇವೆ. ಖಾಲಿ ಇರುವ ಸಚಿವ ಸ್ಥಾನ ಭರ್ತಿ ಮಾಡಬೇಕು ಎಂದು ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪರೋಕ್ಷವಾಗಿ ಶಾಸಕ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದರು.
ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಬಿಎಸ್​​ವೈ, ಸದ್ಯ ಬೊಮ್ಮಾಯಿ‌ ಅಧಿಕಾರ ಗಟ್ಟಿಯಾಗಿದೆ. ಖಾಲಿಯಿರುವ ಖಾತೆಯ ಬಗ್ಗೆ ಪಕ್ಷದಲ್ಲಿ ಈಶ್ವರಪ್ಪ, ಜಾರಕಿಹೊಳಿ ಯಾರು ಅಸಮಾಧಾನ ಹೊಂದಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಕಳೆದ ವಾರ ಮುಖ್ಯಮಂತ್ರಿ ಹೇಳಿದ್ದಾರೆ.ಬಿಜೆಪಿಯಲ್ಲಿ ನಾವೆಲ್ಲ ಸಿಂಹದ ಮರಿಗಳು. ಬಿಎಸ್‌ವೈ ಮುಖ್ಯಮಂತ್ರಿಯಾದಾಗ ನನಗೆ ಸಚಿವ ಸ್ಥಾನ ಕೊಡಬೇಕಿತ್ತು. ಪಕ್ಷಕ್ಕಾಗಿ ಹಗಲು ರಾತ್ರಿ ದುಡಿದಿದ್ದೇನೆ. ಆದರೂ ನನಗೆ ಅಧಿಕಾರ ವಂಚನೆಯಾಗಿದೆ. ಹಾಗಂತ‌ ನಾನು ಬಂಡಾಯ ಎದ್ನಾ? ಬಿಎಸ್‌ವೈ ವಿರುದ್ದ ಮಾತನಾಡಿದ್ನಾ? ಎಂದು ಪ್ರಶ್ನಿಸಿದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × 1 =
Remember me
