ಬೆಂಗಳೂರು:ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 19ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ. ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದು, ಪ್ರಕರಣದ ಆಳ ಕೆದಕಿದಷ್ಟು ಹೊಸ ವಿಚಾರಗಳು ಹೊರಬರುತ್ತಿವೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿಚಾರ ಬೆಳಕಿಗೆ ಬಂದಿದ್ದು, ವಿಚಾರಣೆ ತೀವ್ರಗೊಂಡಂತೆ ಡಿ ಗ್ಯಾಂಗ್​ನ ಕರಾಳ ಮುಖ ಬೆಳಕಿಗೆ ಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಚಾರ ಒಂದು ಬೆಳಕಿಗೆ ಬಂದಿದೆ.
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಸ್ಥಳ ಮಹಜರು ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್​ ಮ್ಯಾನೇಜರ್​ ಎಂದು ಕರೆಯಲ್ಪಡುವ ನಾಗ ಹಾಗೂ ಚಾಲಕ ಲಕ್ಷ್ಮಣ್​ನನ್ನು ಪೊಲೀಸರು ಮೈಸೂರಿನಲ್ಲಿರುವ ರ್‍ಯಾಡಿಸನ್​ ಬ್ಲೂ ಹೋಟೆಲ್​ನಲ್ಲಿ ಸ್ಥಳ ಮಹಜರು ನಡೆಸಿದ್ದರು. ಈ ಹೋಟೆಲ್​ನಲ್ಲಿ ರೇಣುಕಸ್ವಾಮಿ ಹತ್ಯೆಗೆ ಸ್ಕೆಚ್​ ಹಾಕಲಾಗಿತ್ತು ಎಂದು ತಿಳಿದು ಬಂದಿದ್ದು, ಇದರ ಬೆನ್ನಲ್ಲೇ ಪ್ರಕರಣದ ಮಾಸ್ಟರ್​ಮೈಂಡ್​ ಹೆಸರು ಕೂಡ ಹೊರಬಂದಿದೆ.
ಇದನ್ನೂ ಓದಿ:ದರ್ಶನ್ ಪತ್ನಿ ಇರೋ ಅಪಾರ್ಟ್‌ಮೆಂಟ್‌ನಲ್ಲಿ ನಿತ್ಯವೂ ನಡೆಯುತ್ತೆ ಕರ್ಮಕಾಂಡ : ಪ್ರಶಾಂತ್ ಸಂಬರಗಿ ಬಿಚ್ಚಿಟ್ರು ಸ್ಪೋಟಕ ಮಾಹಿತಿ
ದರ್ಶನ್​ ಮ್ಯಾನೇಜರ್ ಆಗಿ ಗುರುತಿಸಿಕೊಂಡಿರುವ ಆರೋಪಿ ನಾಗ ರೇಣುಕಸ್ವಾಮಿ ಹತ್ಯೆ ಹಿಂದಿನ ಮಾಸ್ಟರ್​ಮೈಂಡ್​ ಎಂದು ತಿಳಿದು ಬಂದಿದೆ. ಏಕೆಂದರೆ ದರ್ಶನ್​ ಅಭಿಮಾನಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ್ದ ಆರೋಪಿ ನಾಗ ಯಾರ ಮೂಲಕ ರೇಣುಕಸ್ವಾಮಿ ಕರೆಸಬೇಕು ಎಂದು ನಾಗ ತನ್ನ ಸಂಗಡಿಗರೊಂದಿಗೆ ಪ್ಲ್ಯಾನ್‌ ಮಾಡಿದ್ದ ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇದಕ್ಕಾಗಿ ಮೈಸೂರಿನ ರ್‍ಯಾಡಿಸನ್​ ಬ್ಲೂ ಹೋಟೆಲ್​ನಲ್ಲಿ ಪ್ಲ್ಯಾನ್​ ಹಾಕಿದ್ದ ಎಂದು ತಿಳಿದು ಬಂದಿದೆ. ಈ ಕಾರಣಕ್ಕಾಗಿ ಪೊಲೀಸರು ಹೋಟೆಲ್​ನಲ್ಲಿ ಮಹಜರು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತ ಪ್ರಕರಣದ ಪ್ರಮುಖ ಸಾಕ್ಷ್ಯ ಎಂದು ಹೇಳಲಾದ ರೇಣುಕಸ್ವಾಮಿ ಮೊಬೈಲ್​ಗೆ ಶೋಧ ಕಾರ್ಯ ಮುಂದುರೆದಿದ್ದು, ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಯಾವೆಲ್ಲಾ ತಿರುವು ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
