ಬೆಂಗಳೂರು:ದೇಶಾದ್ಯಂತ ಸಾಕಷ್ಟು ಚರ್ಚೆ ಹುಟ್ಟು ಹಾಕಿರುವ ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 19 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದಿನ ಕಳೆದಂತೆ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣನಿಗೆ ಪೊಲೀಸರು ನೋಟಿಸ್​ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ದಿನ (ಜೂನ್​ 08) ನಟ ದರ್ಶನ್​ ಪ್ರಕರಣದ ಮತ್ತೋರ್ವ ಆರೋಪಿಯಾದ ವಿನಯ್​ ಮಾಲೀಕತ್ವದ ಸ್ಟೋನಿ ಬ್ರೂಕ್​ ರೆಸ್ಟೋ ಬಾರ್​ನಲ್ಲಿ ಪಾರ್ಟಿ ಮಾಡಿದ್ದರು ಎಂದು ತಿಳಿದು ಬಂದಿದೆ. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಸೇರಿದಂತೆ ಕೆಲವರು ಭಾಗಿಯಾಗಿದ್ದರು. ಬಳಿಕ ಕೆಲಸ ಇರುವುದಾಗಿ ಹೇಳಿ ನಟ ದರ್ಶನ್​ ಅಲ್ಲಿಂದ ಹೊರಟಿದ್ದರಂತೆ. ರೇಣುಕಸ್ವಾಮಿ ಹತ್ಯೆ ನಡೆದ ದಿನವೇ ಪಾರ್ಟಿ ಮಾಡಿದ್ದರಿಂದ ಈ ಬಗ್ಗೆ ವಿಚಾರಿಸಲು ನೋಟಿಸ್​ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕೊಲೆ ವಿಚಾರವಾಗಿ ಪಾರ್ಟಿಯಲ್ಲಿ ಏನಾದರೂ ಚರ್ಚೆ ನಡೆದಿತ್ತಾ ಎಂಬುದರ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ. ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + ten =
Remember me
