ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಅವರ ಆಪ್ತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾರಾಜೇಶ್ವರಿನಗರದ ಪಟ್ಟಣಗೆರೆಯಲ್ಲಿರುವ ಜಯಣ್ಣ ಎಂಬುವವರಿಗೆ ಸೇರಿದ ಶೆಡ್​ನಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಶೆಡ್​ ಮಾಲೀಕ ಪಟ್ಟಣಗೆರೆ ಜಯಣ್ಣ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಜಯಣ್ಣ ನಯ್ ನನ್ನ ತಂಗಿಯ ಮಗ. ಶೆಡ್​ನಲ್ಲಿ ಕೊಲೆ ನಡೆದಿರುವುದು ನನಗೆ ತಿಳಿದಿರಲಿಲ್ಲ. ಮಾಧ್ಯಮಗಳ ಮೂಲಕ ತಿಳಿಯಿತು. ಪ್ರಕರಣ ಸಂಬಂಧ ಪೊಲೀಸರು ಕಾನೂನು ರೀತಿ ಕ್ರಮಕೈಗೊಳ್ಳಲಿ. ಕಿಶೋರ್ ಎಂಬುವವರಿಗೆ ಶೆಡ್ ಬಾಡಿಗೆಗೆ ನೀಡಲಾಗಿದೆ. ಪೊಲೀಸರು ನನ್ನನ್ನು ವಿಚಾರಣೆಗೆ ಕರೆದರೆ, ವಿಚಾರಣೆ ಎದುರಿಸಲು ನಾನು ಸಿದ್ಧನಿದ್ದೇನೆ. ನನ್ನ ಮಾಲೀಕತ್ವದ ಭೂಮಿಯಲ್ಲಿಯೇ ಅಪರಾಧ ನಡೆದಿರುವುದರಿಂದ ಯಾವುದೇ ರೀತಿಯ ವಿಚಾರಣೆ ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ದೋಹಾ; 12ನೇ ತಾಳ್​ ಯಾತ್ರಾ ವಾರ್ಷಿಕೋತ್ಸವದಲ್ಲಿ ಮೊಳಗಿತ್ತು ಗಾನಸುಧೆ
ಬಂಧಿತ ಆರೋಪಿಗಳ ಪೈಕಿ ಒಬ್ಬರಾದ ವಿನಯ್​ ಪಟ್ಟಣಗೆರೆ ಜಯಣ್ಣ ಅವರ ಸೋದರಳಿಯ ಎಂದು ಹೇಳಲಾಗಿದ್ದು, ರೇಣುಕಾಸ್ವಾಮಿಯನ್ನು ಶೆಡ್‌ನಲ್ಲಿ ಇರಿಸಲು ವ್ಯವಸ್ಥೆ ಮಾಡಿದ್ದ ಎನ್ನಲಾಗಿದೆ. ವಿನಯ್​ ಆರ್​ಆರ್​ನಗರದಲ್ಲಿ ಸ್ಟೋನಿಬ್ರೂಕ್​ ಎಂಬ ರೆಸ್ಟೋ ಬಾರ್​ ನಡೆಸುತ್ತಿದ್ದು, ಇದಕ್ಕೆ ನಟ ದರ್ಶನ ಅನೇಕ ಬಾರಿ ಭೇಟಿ ನೀಡಿದ್ದಾರೆ.
ಪೊಲೀಸರು ಸೀಝ್ ಮಾಡಿದ ವಾಹನಗಳನ್ನು ನಿಲ್ಲಿಸಲು ಇಂಟ್ಯಾಕ್ಟ್ ಆಟೋಪಾರ್ಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಶೆಡ್​ಅನ್ನು ಬಾಡಿಗೆಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಬುಧವಾರ ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಅಧಿಕಾರಿಗಳ ತಂಡ ಆರೋಪಿಗಳ ಸಮೇತ ಶೆಡ್​ಗೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 1 =
Remember me
