ಬೆಂಗಳೂರು:ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 13ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಪ್ರಕರಣದ ತನಿಖಾಧಿಕಾರಿಯಾದ ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಇತ್ತ ಕಾಮಾಕ್ಷಿಪಾಳ್ಯ ಠಾಣಾಧಿಕಾರಿ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಿದ ಬೆನ್ನಲ್ಲೇ ತನಿಖೆಯ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಅವರಿಗೆ ವಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾವಿಗಳು ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪದ ನಡುವೆಯೇ ವರ್ಗಾವಣೆಯಾಗಿರುವುದು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.
ಇದನ್ನೂ ಓದಿ:40ರ ಆಸುಪಾಸಿನಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್​ಬಾಸ್-10ರ​ ಸ್ಪರ್ಧಿ ಸಿರಿ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಗಿರೀಶ್​ ನಾಯ್ಕ್​ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್​ ಠಾಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಚುನಾವಣೆ ನಿಮಿತ್ತ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾಗಿತ್ತು. ಇದು, ಸಹಜ ವರ್ಗಾವಣೆ ಹೊರತು ದಿಢೀರ್ ವರ್ಗಾವಣೆಯಲ್ಲ ಎಂದು ಹೇಳಿದ್ದಾರೆ.
ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ ಆರೋಪಿಗಳ ಪರ ಪ್ರಭಾವಿಗಳು ಒತ್ತಡ ಹೇರಲು ಶುರು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆಯೇ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 10 =
Remember me
