ಬೆಂಗಳೂರು:ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 19ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ. ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದು, ಪ್ರಕರಣದ ಆಳ ಕೆದಕಿದಷ್ಟು ಹೊಸ ವಿಚಾರಗಳು ಹೊರಬರುತ್ತಿವೆ. ಘಟನೆಗೆ ಸಂಬಂಧಿಸಿದಂತೆ ಹತ್ಯೆಯಾದ ರೇಣುಕಸ್ವಾಮಿ ಮೊಬೈಲ್​ ಪತ್ತೆಯಾಗದಿರುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ರೇಣುಕಸ್ವಾಮಿ ಹತ್ಯೆ ನಡೆದು 10 ದಿನಗಳಾಗುತ್ತ ಬಂದರೂ ಈವರೆಗೂ ಸಂತ್ರಸ್ತನ ಫೋನ್​ ಪತ್ತೆಯಾಗಿಲ್ಲ. ಜೂನ್​ 08ರಂದು ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರದುರ್ಗ ಮೂಲಕ ರೇಣುಕಸ್ವಾಮಿಯನ್ನು ಹತ್ಯೆ ಮಾಡಲಾಗಿತ್ತು. ಜೂನ್​ 08ರಂದು ಆರೋಪಿಗಳು ರೇಣುಕಸ್ವಾಮಿರನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿಗೆ ಕರೆ ತರುವ ವೇಳೆ ಮೊಬೈಲ್​ ಸ್ವಿಚ್​ ಆಫ್​ ಮಾಡಲಾಗಿತ್ತು. ಬಳಿಕ ಪಟ್ಟಣಗೆರೆ ಶೆಡ್​ನಲ್ಲಿ ಮೊಬೈಲ್​ ಆನ್​ ಮಾಡಲಾಗಿತ್ತು. ಬಳಿಕ ಆಫ್​ ಮಾಡಲಾಗಿದೆ.
ಇದನ್ನೂ ಓದಿ:ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ; ಐದು ಮಂದಿ ಮೃತ್ಯು, ಹಲವರು ಗಂಭೀರ
ಹತ್ಯೆಯ ಬಳಿಕ ಸಂತ್ರಸ್ತನ ಮೃತದೇಹವನ್ನು ಸುಮನಹಳ್ಳಿ ಬಳಿ ಇರುವ ರಾಜಕಾಲುವೆಗೆ ಎಸೆಯಲಾಗಿತ್ತು. ಮೃತದೇಹ ಸಿಕ್ಕ ಬಳಿಕ ತನಿಖೆ ಆರಂಭಿಸಿದ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಬಂಧಿತ ಆರೋಪಿಗಳು ರೇಣುಕಸ್ವಾಮಿ ಮೊಬೈಲ್​ಅನ್ನು ರಾಜಕಾಲುವೆಗೆ ಎಸೆದಿದ್ಧಾಗಿ ವಿಚಾರಣೆ ವೇಳೆ ಹೇಳಿದ್ದು, ಅದನ್ನು ಹುಡುಕುತ್ತಾ ಹೊರಟ ಪೊಲೀಸರಿಗೆ ಈವರೆಗೆ ರೇಣುಕಸ್ವಾಮಿ ಮೊಬೈಲ್​ ಪತ್ತೆಯಾಗಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಸ್ವಾಮಿ ಮೊಬೈಲ್​ ಪ್ರಮುಖ ಸಾಕ್ಷ್ಯಾಧಾರವಾಗಿದ್ದು, ಕಮೆಂಟ್​ ಹಾಗೂ ಮೆಸ್ಸೇಜ್​ ಸಂಬಂಧ ಆತನ ಮೊಬೈಲ್​ನಲ್ಲೇ ಕ್ಷಮೆ ಕೋರುತ್ತಿರುವ ವಿಡಿಯೋ ಒಂದನ್ನು ಮಾಡಿಸಿದ್ದರು ಎಂದು ತಿಳಿದು ಬಂದಿದೆ. ಘಟನೆ ನಡೆದು 10 ದಿನಗಳಾಗುತ್ತ ಬಂದರೂ ಈವರೆಗೆ ಮೊಬೈಲ್​ ಪತ್ತೆಯಾಗದಿರುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
