ಬೆಂಗಳೂರು:ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009(ಆರ್​ಟಿಇ ಕಾಯ್ದೆ) ಹಾಗೂ ‘ಕರ್ನಾಟಕ ಮಕ್ಕಳ ಕಡ್ಡಾಯ ಹಾಗೂ ಉಚಿತ ಶಿಕ್ಷಣ ಹಕ್ಕು ನಿಯಮಗಳು-2012’ರ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂಬರುವ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಕಡ್ಡಾಯವಾಗಿ ಮನೆ-ಮನೆ ಸಮೀಕ್ಷೆಯನ್ನು 2020ರ ಏ.30ರೊಳಗೆ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಮಕ್ಕಳ ವಿಚಾರ ಕುರಿತು ಹೈಕೋರ್ಟ್ 2013ರಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ವಿಚಾರವಾಗಿ ಸರ್ಕಾರಕ್ಕೆ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದೆ. ಆರ್​ಟಿಇ ಪರಿಣಾಮಕಾರಿ ಅನುಷ್ಠಾನಗೊಳ್ಳಬೇಕು ಹಾಗೂ ಎಲ್ಲಾ ಮಕ್ಕಳಿಗೆ ಉಚಿತ ಶಿಕ್ಷಣ ಕಡ್ಡಾಯವಾಗಿ ಸಿಗುವಂತಾಗಬೇಕು ಎಂದರೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ನಿಖರವಾಗಿ ಗೊತ್ತಿರಬೇಕು. ಕಾಯ್ದೆ ಪ್ರಕಾರ ಆಯಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 0-14 ವರ್ಷದ ಮಕ್ಕಳ ಮಾಹಿತಿ ಸಂಗ್ರಹಿಸಬೇಕು. ಇದಕ್ಕಾಗಿ ಮನೆ-ಮನೆ ಸಮೀಕ್ಷೆ ನಡೆಸಿ ಆ ದಾಖಲೆಗಳನ್ನು ನಿರ್ವಹಿಸುವ ಜವಾಬ್ದಾರಿ ಎಲ್ಲ ಸ್ಥಳೀಯ ಸಂಸ್ಥೆಗಳ ಮೇಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.
ಮನೆ-ಮನೆ ಸಮೀಕ್ಷೆ ಕಾರ್ಯಕ್ಕೆ ಸ್ವಸಹಾಯ ಗುಂಪುಗಳು ಹಾಗೂ ಎನ್​ಜಿಒಗಳನ್ನು ಬಳಸಿ ಕೊಳ್ಳಬಹುದು ಎಂದು ನ್ಯಾಯಪೀಠ ಸೋಮವಾರ ಸ್ಪಷ್ಟ ನಿರ್ದೇಶನ ನೀಡಿತು.
ಬ್ರಾಹ್ಮಣ್ಯ ಬೆಳೆಯುವುದು ಬೇಡ, ಅವರ ಬುದ್ಧಿವಂತಿಕೆ ಬೆಳೆದರೆ ಸಾಕು ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

ಸಿಎಎ ವಿರೋಧದಲ್ಲಿ ಜಿಹಾದಿ, ವಿದೇಶಿ ಶಕ್ತಿಗಳು ಕೈವಾಡವಿದೆ ಎಂದು ಆರೆಸ್ಸೆಸ್​ನ ಭಯ್ಯಾಜಿ ಜೋಶಿ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
