ಬೆಂಗಳೂರು:ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು ಮತ್ತು ಪ್ರತಿಪಕ್ಷ ನಾಯಕ- ಶಾಸಕಾಂಗ ನಾಯಕ ಸ್ಥಾನ ಪ್ರತ್ಯೇಕವಾಗಬೇಕೆ? ಎಂಬ ವಿಚಾರದಲ್ಲಿ ರಾಜ್ಯದ ಪ್ರಮುಖ ನಾಯಕರ ಅಭಿಪ್ರಾಯವಿರುವ ಮೂರನೇ ವರದಿ ಹೈಕಮಾಂಡ್ ಕೈ ಸೇರಿದೆ.
ಮೊದಲು ಮಧುಸೂದನ್ ಮಿಸ್ತ್ರಿ ಬೆಂಗಳೂರಿಗೆ ಆಗಮಿಸಿ ಅಭಿಪ್ರಾಯ ಸಂಗ್ರಹಿಸಿದ್ದರು. ಬಳಿಕ ಗುಲಾಂ ನಬಿ ಆಜಾದ್ ಅಭಿಪ್ರಾಯ ಕೇಳಿದ್ದರು. ಇದೀಗ ಡಾ.ಜಿ.ಪರಮೇಶ್ವರ್ ತಮ್ಮ ಮನೆಯಲ್ಲಿ ನಡೆಸಿದ ಸಭೆ ವಿವರವನ್ನು ಹೈಕಮಾಂಡ್​ಗೆ ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಅನಿವಾರ್ಯ ಎಂದು ಎಲ್ಲ ನಾಯಕರು ಹೇಳಿದ್ದಾರೆ, ಆದರೆ ಯಾರಾಗಬೇಕೆಂಬ ವಿಚಾರದಲ್ಲಿ ಒಮ್ಮತ ಮೂಡಿಲ್ಲ ಎಂಬ ಅಂಶ ವರದಿಯಲ್ಲಿದೆ ಎನ್ನಲಾಗಿದೆ. ಜತೆಗೆ ಶಾಸಕಾಂಗ ಪಕ್ಷದ ನಾಯಕ ಸ್ಥಾನ- ಪ್ರತಿಪಕ್ಷ ನಾಯಕ ಸ್ಥಾನ ಪ್ರತ್ಯೇಕಗೊಳಿಸುವ ಬಗ್ಗೆ ಹೆಚ್ಚಿನವರು ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ವೀರಶೈವ- ಲಿಂಗಾಯತ ಸಮುದಾಯಕ್ಕೆ ಸೇರಿರುವ ಕಾರಣ ಅದೇ ಸಮುದಾಯದವರನ್ನು ಪ್ರತಿಪಕ್ಷ ನಾಯಕನನ್ನಾಗಿ ಮಾಡಿದರೆ ಹೆಚ್ಚಿನ ಉಪಯೋಗವಾಗಲ್ಲ ಎಂಬ ಮಾತು ಪಕ್ಷದಲ್ಲಿದೆ. ಈ ಎಲ್ಲ ಸಂಗತಿಗಳೂ ಹೈಕಮಾಂಡ್ ಗಮನಕ್ಕೆ ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ವಾರದಲ್ಲೇ ರಾಜ್ಯದ ಪ್ರಮುಖ ನಾಯಕರನ್ನು ಆಹ್ವಾನಿಸುವ ಹೈಕಮಾಂಡ್, ಸಭೆ ನಡೆಸಿ ಅಭಿಪ್ರಾಯ ನೀಡಲಿದೆ. ಜ.15ರ ಬಳಿಕ ಹೊಸ ಅಧ್ಯಕ್ಷರು ಪದಗ್ರಹಣ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ.
ನನಗೂ ಕೆಪಿಸಿಸಿ ಅಧ್ಯಕ್ಷನಾಗಬೇಕೆಂಬ ಅಪೇಕ್ಷೆಯಿದೆ. ಈ ಕುರಿತು ವರಿಷ್ಠರಿಗೆ ಪತ್ರ ಬರೆದಿದ್ದೇನೆ. ಜ.9ಕ್ಕೆ ನವದೆಹಲಿಗೆ ತೆರಳಿ ವರಿಷ್ಠರಿಗೆ ಮನವಿ ಮಾಡುತ್ತೇನೆ. ಡಿ.ಕೆ.ಶಿವಕುಮಾರ್ ಆಗಲಿ ಯಾರೇ ಆಗಲಿ. ರಾಜಕೀಯ ನಿಂತ ನೀರು ಆಗಬಾರದು. ಪಕ್ಷ ಸಂಘಟನೆ ಮುಖ್ಯ. ಪಕ್ಷ ಮುನ್ನಡೆಸುವ ಜವಾಬ್ದಾರಿ ಕೊಟ್ಟರೆ ನಿಭಾಯಿಸಬಲ್ಲೆ.
| ಕೆ.ಎನ್.ರಾಜಣ್ಣ ಮಾಜಿ ಶಾಸಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
