ಬೆಂಗಳೂರು:ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿಗೆ ಎಂಬ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ ಹಾಗೂ ಈ ತಂಡ ಪ್ರಸ್ತುತ ಅಪಾಯದಲ್ಲಿದೆ ಎಂಬ ಮಾಹಿತಿ ಮಂಗಳವಾರ ರಾತ್ರಿ ನಮಗೆ ತಿಳಿದುಬಂದಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.
ಈ ತಂಡದಲ್ಲಿದ್ದ ಕೆಲವರು ಪ್ರಸ್ತುತ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಲಿದೆ. ಇದಲ್ಲದೆ, ಇಂದು ಬೆಳಿಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ ಎಂದು ಕೃಷ್ಣಬೈರೇಗೌಡ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 6 =
Remember me
