ಬೆಂಗಳೂರು:ಹೊರ ಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸುವ ಮೂಲಕ ಅಧಿಕೃತ ಮುದ್ರೆ ಒತ್ತಿದೆ.
ಡಿ.21,2023 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿ ಜಾರಿಗೊಳಿಸಲು ನಿರ್ಣಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆಯಲ್ಲದೆ, ಕೆಲವು ಸೂಚನೆಗಳನ್ನು ಪಾಲಿಸಲು ನಿರ್ದೇಶಿಸಲಾಗಿದೆ.
ರಾಜ್ಯಪತ್ರದಲ್ಲಿ ನೀಡಿರುವ ಸೂಚನೆಗಳು ಸರ್ಕಾರದ ಎಲ್ಲ ಇಲಾಖೆಗಳು/ಸ್ವಾಯತ್ತ ಸಂಸ್ಥೆಗಳು /ನಿಗಮಗಳು/ಮಂಡಳಿಗಳು/ವಿಶ್ವವಿದ್ಯಾವಿಲಯಗಳಿಗೂ ಅನ್ವಯಿಸುತ್ತದೆ.
*ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.*ಪ್ರತಿ ವರ್ಷವು ಹೊರ ಸಂಪನ್ಮೂಲ ಏಜಿನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಪರತ್ತುಗಳನ್ನು ನಮೂದಿಸುವುದು.*ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಟ ಶೇ.33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೂಳ್ಳತಕ್ಕದ್ದು.*ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜಿನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು(ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ).*ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.*ಯಾವುದೇ ಇಲಾಖೆಯಲ್ಲಿ ಕನಿಷ್ಟ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.*ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಟ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.*ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಕಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:ten + seven =
Remember me
