ಬೆಂಗಳೂರು: ಒಳಮೀಸಲಾತಿ ಕುರಿತಂತೆ ಸರ್ಕಾರದ ಮುಂದಿರುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ವಿಚಾರದಲ್ಲಿ ಒಂದಷ್ಟು ಬಿರುಸಿನ ಬೆಳವಣಿಗೆ ನಡೆದಿದ್ದು, ಗುರುವಾರ ಎರಡು ಪ್ರಮುಖ ಸಭೆ ನಡೆದಿವೆ. ಆ ಮೂಲಕ ವರದಿ ಜಾರಿಗೆ ಇರುವ ಅಡೆತಡೆ ನಿವಾರಿಸುವ ಪ್ರಯತ್ನ ನಡೆದಿದೆ.
ವರದಿ ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿಕೆ ನೀಡಿದ ಬೆನ್ನಲ್ಲೇ, ವರದಿ ಸಮರ್ಪಕವಾಗಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿಕೆ ನೀಡಿದ್ದರು. ಹೀಗಾಗಿ ಈ ವಿಚಾರದಲ್ಲಿ ಗೊಂದಲ ಉಂಟಾಗದಂತೆ ನೋಡಿಕೊಳ್ಳುವ ಪ್ರಯತ್ನ ಆರಂಭವಾಗಿದೆ. ಆರ್‌ಎಸ್‌ಎಸ್ ಕಚೇರಿಯಲ್ಲಿ ಸುಮಾರು ಎರಡು ಗಂಟೆ ಬಿಜೆಪಿಯಲ್ಲಿನ ಮಾದಿಗ ಸಮುದಾಯದ ಜನಪ್ರತಿನಿಧಿಗಳು ಹಾಗೂ ಮುಖಂಡರ ಸಭೆ ನಡೆಸಿ ವರದಿ ಕುರಿತಾಗಿ ವಿಮರ್ಶೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಮಕ್ಕಳ ಎದುರೇ ಮಹಿಳೆಯನ್ನು ರೇಪ್​​ ಮಾಡಿದ ದುರುಳರು; ಅವಳ್ಯಾಕೆ ಹೋಗಬೇಕಿತ್ತು ಎಂದ ಪೊಲೀಸ್​ ಮುಖ್ಯಸ್ಥ
ಒಳಮೀಸಲಾತಿ ಸಂಬಂಧ ನ್ಯಾಯಾಲಯ ಅಭಿಪ್ರಾಯ ನೀಡಿದ್ದು, ಮುಂದೆ ಏನೇ ತೀರ್ಪು ಬಂದರೂ ಸರಿಯೇ, ಸದಾಶಿವ ಆಯೋಗದ ವರದಿ ಜಾರಿಯಾಗಿ ಮಾದಿಗ ಸಮುದಾಯಕ್ಕೆ ನ್ಯಾಯ ಸಿಗಬೇಕು. ಪಕ್ಷದಲ್ಲಿರುವ ಭೋವಿ ಮತ್ತು ಲಂಬಾಣಿ ಸಮುದಾಯದ ನಾಯಕರು ವರದಿ ಜಾರಿ ಕುರಿತು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಈ ಬೆಳವಣಿಗೆಗೆ ತಡೆಹಾಕಿ ಗೊಂದಲ ನಿವಾರಿಸುವ ಕೆಲಸ ಆಗಬೇಕಾಗಿದೆ. ಆರ್‌ಎಸ್‌ಎಸ್ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಸರ್ಕಾರ ಮತ್ತು ಪಕ್ಷದಲ್ಲಿ ವರದಿಯನ್ನು ವಿರೋಧಿಸುವವರಿಗೆ ತಿಳಿಹೇಳಿ ಗೊಂದಲ ನಿವಾರಿಸಬೇಕು ಎಂದು ಮಾದಿಗ ಸಮುದಾಯದ ಪ್ರಮುಖರು ಕೋರಿಕೆ ಇಟ್ಟಿದ್ದಾರೆ.
ಇದನ್ನೂ ಓದಿ:ಎಸ್ಸೆಸ್ಸೆಲ್ಸಿ: ಮರುಮೌಲ್ಯಮಾಪನದ ಬಳಿಕ ರಾಜ್ಯಕ್ಕೆ 5ನೇ ಸ್ಥಾನ ಪಡೆದ ವಿದ್ಯಾರ್ಥಿನಿ!
ಈ ಹಿಂದೆ ಕಾಂಗ್ರೆಸ್ ಸರ್ಕಾರ ವರದಿ ಜಾರಿ ಮಾಡದೇ ಮಾದಿಗ ಸಮುದಾಯಕ್ಕೆ ಅವಮಾನ ಮಾಡಿದೆ. ಇದರ ಪ್ರತಿಲ ಅವರಿಗೆ ಚುನಾವಣೆಯಲ್ಲಿ ಸಿಕ್ಕಿದೆ. ನಮ್ಮ ಸಮುದಾಯದವರು ಚುನಾವಣೆಯಲ್ಲಿ ಬಿಜೆಪಿ ಪರ ನಿಂತರು. ಈಗ ಬಿಜೆಪಿ ಅಧಿಕಾರದಲ್ಲಿದ್ದು ವರದಿ ಜಾರಿಗೆ ಅವಕಾಶವಿದೆ. ಬಿಜೆಪಿಯೂ ಉದಾಸೀನ ಮಾಡಿದರೆ ಮುಂದೆ ಪರಿಣಾಮ ಎದುರಿಸಲಿ ಎಂದು ಸಭೆಯಲ್ಲಿದ್ದವರು ಎಚ್ಚರಿಸಿದ್ದಾರೆ.ಇದನ್ನೂ ಓದಿ:ವಿಸ್ತರಣೆಯಾಯ್ತು ಮಾರಟೋರಿಯಂ: ಸಾಲಗಾರರನ್ನು ಪೀಡಿಸಬೇಡಿ ಎಂದ ಸುಪ್ರೀಂಕೋರ್ಟ್
ಮೀಸಲಾತಿ ವಿಚಾರದಲ್ಲಿ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ, ಸದಾಶಿವ ಆಯೋಗದ ವರದಿ ಜಾರಿ ಆಗಬೇಕೆಂದು ಸಭೆಯಲ್ಲಿದ್ದ ಪ್ರಮುಖರು ಅಭಿಪ್ರಾಯವನ್ನೂ ನೀಡಿದ್ದಾರೆ. ಹಾಗೆಯೇ ಯಾರು ವಿರೋಧ ವ್ಯಕ್ತಪಡಿಸುತ್ತಿದ್ದಾರೋ ಅವರನ್ನು ಕರೆಸಿ ಮಾತನಾಡಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ:VIDEO: ಪಾರ್ಕ್​​ಗಳು ಮತ್ತೆ ತೆರೆದ ಖುಷಿಯಲ್ಲಿ ಪರಮಾವಧಿ ಮೂರ್ಖತನ ತೋರಿದ ಸಾರ್ವಜನಿಕರು
ಸಭೆಯಲ್ಲಿ ಆರ್‌ಎಸ್‌ಎಸ್ ಕಡೆಯಿಂದ ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ, ಪ್ರಾಂತಕಾರ್ಯವಾಹ ಸುಧೀರ್, ವಾದಿರಾಜ್ ಇದ್ದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ನಾರಾಯಣ ಸ್ವಾಮಿ, ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ ಮತಿಮುಡ, ಮಾದಿಗ ಸಮುದಾಯದ ಹೋರಾಟಗಾರರಾದ ಬಳ್ಳಾರಿ ಹನುಮಂತಪ್ಪ, ಮುತ್ತಣ್ಣ ಬೆನ್ನೂರು ಇದ್ದರು.
ಡ್ರಗ್ ಕೇಸ್: ಬಂಧಿತ ನಟಿಯರಿಗೆ ಚಿಕನ್ ಬಿರಿಯಾನಿ ಕೊಡಿಸಿದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
