ಬೆಂಗಳೂರು:2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಲಿಂಗಾಯತರು ನಡೆಸುತ್ತಿರುವ ಹೋರಾಟ ಕಾವೇರಿದ್ದು, ಇದೀಗ ಹೋರಾಟಗಾರರ ದಂಡು ವಿಧಾನಸೌಧದತ್ತ ಸಾಗುತ್ತಿದ್ದು, ಸಂಚಲನ ಮೂಡಿಸಿದೆ. ಪ್ರತಿಭಟನಾಕಾರರು ವಿಧಾನಸೌಧಕ್ಕೆ ತಲುಪದಂತೆ ತಡೆಯಲು ಪೊಲೀಸರು ಹರಸಾಹಸ ಮಾಡುತ್ತಿದ್ದು, ಸುತ್ತಮುತ್ತಲಿನ ರಸ್ತೆಗಳಲ್ಲೆಲ್ಲ ಟ್ರಾಫಿಕ್​ ಜಾಮ್​ ಸೃಷ್ಟಿಯಾಗಿದೆ.
ಪಂಚಮಸಾಲಿ ಲಿಂಗಾಯತ ಸಮುದಾಯದ ಸ್ವಾಮೀಜಿಗಳು ಹಾಗೂ ರಾಜಕೀಯ ನಾಯಕರ ನೇತೃತ್ವದಲ್ಲಿ ಬೆಳಗ್ಗೆ ಅರಮನೆ ಮೈದಾನದಲ್ಲಿ ಸಮಾವೇಶ ಸೇರಿ ಕೆಲವು ನಿರ್ಣಯ ಕೈಗೊಂಡಿರುವ ಪ್ರತಿಭಟನಾಕಾರರು, ಇದೀಗ ಅದೇ ನೇತೃತ್ವದಲ್ಲಿ ವಿಧಾನಸೌಧದ ಬಳಿಗೆ ತೆರಳಿ ಧರಣಿ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಈ ಸಮುದಾಯದವರು ಅರಮನೆ ಮೈದಾನದಿಂದ ವಿಧಾನಸೌಧದತ್ತ ತೆರಳುತ್ತಿದ್ದು, ಕಾವೇರಿ ಜಂಕ್ಷನ್ ಬಳಿ ಪೊಲೀಸರು ಅವರನ್ನು ತಡೆದಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಹರಸಾಹಸ ಪಡುತ್ತಿದ್ದಾರೆ. ಪ್ಯಾಲೇಸ್​ ಗುಟ್ಟಹಳ್ಳಿ ಬಳಿ ಬ್ಯಾರಿಕೇಡ್ ಹಾಕಿರುವ ಪೊಲೀಸರು ಕೆಎಸ್​ಆರ್​ಪಿ ವಾಹನಗಳನ್ನೇ ರಸ್ತೆ ಅಡ್ಡಲಾಗಿಟ್ಟು, ವಿಧಾನಸೌಧಕ್ಕೆ ತೆರಳದಂತೆ ತಡೆಯಲು ಮುಂದಾಗಿದ್ದಾರೆ. ಪರಿಸ್ಥಿತಿ ಹದಗೆಡದಂತೆ ಕಾನೂನುಸುವ್ಯವಸ್ಥೆ ಕಾಪಾಡಲು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೇ ಖುದ್ದು ಫೀಲ್ಡ್​ಗಿಳಿದು ಸೂಚನೆ ನೀಡಲಾರಂಭಿಸಿದ್ದಾರೆ.
ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಲಿಂಗಾಯತ ಸಮುದಾಯದವರು ವಿಧಾನಸೌಧದತ್ತ ತೆರಳದಂತೆ ತಡೆಯಲು ಕೆಎಸ್​ಆರ್​ಪಿ ಬಸ್​ಗಳನ್ನೇ ರಸ್ತೆಗೆ ಅಡ್ಡ ಇಟ್ಟು ಕಟ್ಟೆಚ್ಚರ ವಹಿಸಿರುವ ಪೊಲೀಸರು.ವಿವರಗಳಿಗೆhttps://t.co/YaFZZbZDD9ನೋಡಿpic.twitter.com/cjThGTXsOJ
— Vijayavani (@VVani4U)February 21, 2021

ಯಾವುದೇ ಕಾರಣಕ್ಕೂ ವಿಧಾನಸೌಧ ಬಳಿ ಧರಣಿ ನಡೆಸಲು ಅವಕಾಶ ಕೊಡದಂತೆ ಸರ್ಕಾರ ಪೊಲೀಸರಿಗೆ ಸೂಚನೆ ನೀಡಿದ್ದು, ಆ ನಿಟ್ಟಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಪ್ರತಿಭಟನೆ, ಪೊಲೀಸರ ಬಂದೋಬಸ್ತ್ ನಡುವೆ ಸಂಚಾರದಟ್ಟಣೆ ಉಂಟಾಗಿದ್ದು, ಸಾರ್ವಜನಿಕರ ವಾಹನಗಳೂ ಮಾರ್ಗಮಧ್ಯೆ ಸಿಲುಕಿಕೊಂಡಂತಾಗಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಪಂಚಮಸಾಲಿ ಸಮಾವೇಶದಲ್ಲಿ ಕಣ್ಣೀರಿಟ್ಟ ವಿನಯ್ ಕುಲಕರ್ಣಿ ಪತ್ನಿ

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಅಸ್ತಿತ್ವಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + twelve =
Remember me
