ಬೆಂಗಳೂರು:ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಹೆಚ್ಚುತ್ತಿದ್ದು, ಅಕ್ರಮ ಕಟ್ಟಡಗಳ ನಿರ್ಮಾಣ ಎಗ್ಗಿಲ್ಲದೆ ನಡೆಯುತ್ತಿವೆ. ಭೂಗಳ್ಳತನ, ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಹೆಮ್ಮಿಗೆಪುರ ವಾರ್ಡ್ ನಿವಾಸಿಗಳು ಸಮರ ಸಾರಿದ್ದಾರೆ. ಭೂ ದರೋಡೆಕೋರರು ನಮ್ಮ ಬಡಾವಣೆಯೊಳಗೆ ಪ್ರವೇಶ ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.
ಹೆಮ್ಮಿಗೆಪುರ ವಾರ್ಡ್‌ನ ಸುಮಾರು 400 ಜನ ಸಾರ್ವಜನಿಕರು ಈ ಸಬಂಧ ಸಭೆ ಸೇರಿ ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಸರ್ಕಾರಿ ಭೂಮಿಯ ಒತ್ತುವರಿ ವಿರುದ್ಧ ಹೋರಾಟಕ್ಕೆ ನಿರ್ಧರಿಸಿದರು. ಈ ಬಗ್ಗೆ ಸ್ಥಳೀಯರಿಗೆ ಜಾಗೃತಿ ಮೂಡಿಸಲು ಹೆಮ್ಮಿಗೆಪುರದಲ್ಲಿ ಜಾಥಾ ನಡೆಸಿದರು.
ಭೂಗಳ್ಳರಿಗೆ ಪ್ರವೇಶವಿಲ್ಲ:ಜಾಥಾಕ್ಕೂ ಮುನ್ನ ಏರಿಯಾ ಪ್ರವೇಶದ್ವಾರದ ಬಳಿ ‘ಭೂಗಳ್ಳರಿಗೆ ಪ್ರವೇಶವಿಲ್ಲ’ ಎಂಬ ನಾಮಫಲಕ ಹಾಕಲಾಯಿತು. ಸರ್ಕಾರಿ ಭೂಮಿ ಒತ್ತುವರಿ ಮಾಡಿ ಆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡುವುದರಿಂದ ಉಂಟಾಗುವ ಪರಿಣಾಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಲಾಯಿತು. ಒಂದು ವೇಳೆ ಭೂಕಬಳಿಕೆ ಅಥವಾ ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ಗಮನಕ್ಕೆ ಬಂದರೆ ಸಂಬಂಧಿಸಿದ ಸಂಸ್ಥೆಗಳು ಕೈಗೊಳ್ಳಬೇಕಾದ ಮುಂದಿನ ಕ್ರಮದ ಕುರಿತು ಾಲೋಪ್ ಮಾಡುವ ಬಗ್ಗೆಯೂ ನಿರ್ಣಯಿಸಲಾಯಿತು. ಈ ಮೂಲಕ ರಾಜಕಾರಣಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಕೂಡಾ ಎಚ್ಚರಿಸುವ ಕೆಲಸ ಮಾಡಲು ನಿರ್ಧರಿಸಿದರು.
ಹೋರಾಟ ಮುಂದುವರಿಕೆ:ಭೂಗಳ್ಳತನ ಮತ್ತು ಅಕ್ರಮ ಕಟ್ಟಡ ನಿರ್ಮಾಣ ಒಂದು ದಿನಕ್ಕೆ ಮುಕ್ತಾಯವಾಗುವ ಸಮಸ್ಯೆಯಲ್ಲ. ಆದ್ದರಿಂದ ಈ ಬಗ್ಗೆ ನಿರಂತರ ಹೋರಾಟಕ್ಕೆ ನಿವಾಸಿಗಳು ನಿರ್ಧರಿಸಿದ್ದಾರೆ. ಕಾರ್ಯಾಂಗ, ನ್ಯಾಯಾಂಗ ಹಾಗೂ ಶಾಸಕಾಂಗವನ್ನು ಬಳಸಿಕೊಂಡು ಸಮರ್ಥವಾಗಿ ಹೋರಾಡಲು ಸಾರ್ವಜನಿಕರು ಸಂಕಲ್ಪ ಮಾಡಿದರು. ಯು.ಎಂ.ಕಾವಲ್, ಹೆಮ್ಮಿಗೆಪುರ ಹಾಗೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಕ್ರಮ ಭೂಚಟುವಟಿಕೆಗಳ ವಿರುದ್ಧ ಕಾನೂನಾತ್ಮಕವಾಗಿ ಹೋರಾಡುವ ಮೂಲಕ ಮುಂದಿನ ಪೀಳಿಗೆಗೆ ಪಾರ್ಕ್, ಪಾದಚಾರಿ ಮಾರ್ಗ, ಸುಸಜ್ಜಿತ ನಗರವನ್ನು ಉಳಿಸುವುದು ಹೋರಾಟದ ಉದ್ದೇಶ ಎಂದು ಸ್ಥಳೀಯ ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘ ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 7 =
Remember me
