ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್​ ಅವರನ್ನು ಕೊಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಆಗ್ರಹಿಸಿ ಬಿಜೆಪಿ ಯುವ ಪದಾಧಿಕಾರಿಗಳು ಆರಂಭಿಸಿರುವ ರಾಜೀನಾಮೆ ತಂತ್ರ ಚಳವಳಿ ರೂಪವನ್ನು ಪಡೆಯಲಾರಂಭಿಸಿದೆ.
ತುಮಕೂರು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕಿ ಶಕುಂತಲಾ ನಟರಾಜ್, ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಸೇರಿದಂತೆ ಇತರ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಿಗೆ ರಾಜ್ಯದ ವಿವಿಧ ಭಾಗಗಳಲ್ಲಿನ ಬಿಜೆಪಿ ಯುವ ಪದಾಧಿಕಾರಿಗಳು ರಾಜೀನಾಮೆ ನೀಡಲಾರಂಭಿಸಿದ್ದಾರೆ.
ಬಾಗಲಕೋಟೆಯ ತೇರದಾಳ ಶಾಸಕ ಸಿದ್ದು ಸವದಿ ಅವರ ಪುತ್ರ ವಿದ್ಯಾಧರ ಸವದಿ ಬಾಗಲಕೋಟೆ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಶ್ರೀನಿವಾಸ ಪೂಜಾರಿ ಅವರ ಕ್ಷೇತ್ರವಾದ ಕೋಟದ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಸುಶಾಂತ್ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮಂಡಲದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿಧರ್ ಆಕ್ರೋಶ ವ್ಯಕ್ತಪಡಿಸಿದ್ದು, ಅವರು ಸೇರಿದಂತೆ ಎಲ್ಲ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ಕಾರಟಗಿ ಮಂಡಲ ಮಹಿಳಾ ಪ್ರಧಾನ ಕಾರ್ಯದರ್ಶಿ ಸುಹಾಸಿನಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಹತ್ಯೆ, ಸರ್ಕಾರದ ವೈಫಲ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿ ಸ್ಥಾನಕ್ಕೆ ಮಾಜಿ ಜಿಲ್ಲಾಧ್ಯಕ್ಷ ಮಾಚಿಮಾಡ ರವೀಂದ್ರ ರಾಜೀನಾಮೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರ್ಮಿಕ ಜಿಲ್ಲಾ ಪ್ರಕೋಷ್ಠಕದ ಸಂಚಾಲಕ ಶಿವಕುಮಾರ್ ಅದೋನಿ ಕೂಡ ರಾಜೀನಾಮೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅರಭಾವಿ ಸಾಮಾಜಿಕ ಜಾಲತಾಣ ಸದಸ್ಯ ಸ್ಥಾನಕ್ಕೆ ಅವಿನಾಶ್ ಹಿರೇಮಠ ರಾಜೀನಾಮೆ ನೀಡಿದ್ದಾರೆ.
ಪ್ರವೀಣ್ ಹತ್ಯೆಗೆ ನ್ಯಾಯ ಸಿಗುವವರೆಗೂ ಸಂಘಟನೆಯಲ್ಲಿ ಕೆಲಸ ಮಾಡುವುದಿಲ್ಲ, ಅಗತ್ಯ ಬಿದ್ದರೆ ರಾಜೀನಾಮೆಗೂ ಸಿದ್ಧ ಎಂದು ಚಿತ್ರದುರ್ಗದ ಹೊಸದುರ್ಗ ಮಂಡಲ ಉಪಾಧ್ಯಕ್ಷ ಮಂಜು ಸಾಣೇಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದು, ಹೊಸದುರ್ಗ ಮಂಡಲ ಕಾರ್ಯದರ್ಶಿ ಎನ್.ಆರ್. ಜಗದೀಶ್, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ರಮೇಶ್ ಗೂಳಿಹಟ್ಟಿ ಸೇರಿ ಹಲವು ಕಾರ್ಯಕರ್ತರು ಸಂಘಟನೆಯಲ್ಲಿ ಕೆಲಸ ಮಾಡುವುದಿಲ್ಲ ಎಂದು ಪತ್ರಮುಖೇನ ತಿಳಿಸಿದ್ದಾರೆ.
ಹುಸಿಯಾದ ಬಿಜೆಪಿ ಕಠಿಣ ಕ್ರಮದ ಭರವಸೆ; ಬೇಸತ್ತು ಪಕ್ಷದ ಜಿಲ್ಲಾ ಸಹ ಸಂಚಾಲಕಿ ರಾಜೀನಾಮೆ..

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ; ತಾಯಿ-ಪತ್ನಿ ಹೇಳಿದ್ದೇನು?

ಪ್ರವೀಣ್ ನೆಟ್ಟಾರ್ ಹತ್ಯೆ: ಕಠಿಣ ಕ್ರಮಕ್ಕಾಗಿ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಅಸ್ತ್ರ..

ವಿಶ್ವ ಕುಂದಾಪುರ ಕನ್ನಡ ದಿನಾಚರಣೆ; ನಾಳೆ ಹಲವೆಡೆ ಸಾಂಸ್ಕೃತಿಕ ಸಂಭ್ರಮ..

ಪ್ರವೀಣ್ ನೆಟ್ಟಾರೆ ಹತ್ಯೆ ಪ್ರಕರಣ; 15 ಮಂದಿ ವಶಕ್ಕೆ, ಯಾರನ್ನೂ ಬಂಧಿಸಿಲ್ಲ: ಎಡಿಜಿಪಿ ಅಲೋಕ್ ಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
