ಬೆಂಗಳೂರು:ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ.
ಇದನ್ನೂ ಓದಿ:ಯುಪಿಎಸ್​ಸಿ, ಎಸ್​ಎಸ್​ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ: ಕೇಂದ್ರ ಸರ್ಕಾರ
ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕರ ನೀಡಿತು.

ವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹೀಗಾಗಿ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು, ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ರದ್ದುಪಡಿಸುವುದು. ಜೊತೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ ಅದಿನಿಯಮ 2019ರಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಎಂದು ಮನವಿ ಮಾಡಿದರು. ಸಭಾಧ್ಯಕ್ಷ ಯು ಟಿ ಖಾದರ್ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.

ವಿಧಾನಪರಿಷತ್​ನಲ್ಲೂ ಅಂಗೀಕಾರ:ನೀಟ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯಕ್ಕೆ ವಿಧಾನಪರಿಷತ್​​ನಲ್ಲೂ ಅಂಗೀಕಾರ ಸಿಕ್ಕಿದೆ.ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳು ವಿರೋಧದ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯ ಅಂಗೀಕಾರವಾಗಿದೆ ಎಂದು ಘೋಷಣೆ ಮಾಡಿದರು.ಇದಕ್ಕೂ ಮುನ್ನ ನಿರ್ಣಯದ ಮೇಲೆ ಮಾತನಾಡಿದ ಶಿವಕುಮಾರ್ ಅವರು, ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್ನಿಂದ ವಿನಾಯ್ತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ನಟ ದರ್ಶನ್​ ಭೇಟಿ ಮಾಡಿದ ಬಳಿಕ ಸಾಧುಕೋಕಿಲ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 2 =
Remember me
